ಉಡುಪಿ : ನಗರದ ಮಾರುಥಿ ವೀಥಿಕಾ ಬಳಿ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಂಬದ ವೈರ್ಗಳು ಹೊತ್ತಿ ಉರಿದ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ಉಂಟಾದಾಗ ಲಾಕ್ಡೌನ್ನಿಂದಾಗಿ ಜನ ಸಂಚಾರ ಇರಲಿಲ್ಲ. ತುರ್ತು ಆ್ಯಂಬುಲೆನ್ಸ್ ಸೇವೆಯಲ್ಲಿ ನಿರತರಾಗಿದ್ದ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಘಟನೆಯ ಬಗ್ಗೆ ಮೆಸ್ಕಾಂ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇನ್ನು ಶಾರ್ಟ್ ಸೆರ್ಕ್ಯೂಟ್ ಉಂಟಾದ ಸ್ಥಳದ ಸನಿಹದಲ್ಲಿದ್ದ ವಾಣಿಜ್ಯ ಸಂಕೀರ್ಣದಲ್ಲಿ ಬಹಳಷ್ಟು ಮಳಿಗೆಗಳಿದ್ದವು. ನಾಗರಿಕ ಸಮಿತಿಯ ಕಾರ್ಯಕರ್ತರ ಸಮಯ ಪ್ರಜ್ಞೆ ಮತ್ತು ಇಲಾಖೆ ಸಿಬ್ಬಂದಿಯ ತಕ್ಷಣದ ಕಾರ್ಯಾಚರಣೆಯಿಂದಾಗಿ ದೊಡ್ಡ ಮಟ್ಟದ ಅಗ್ನಿ ದುರಂತ ತಪ್ಪಿದಂತಾಗಿದೆ.