ETV Bharat / state

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು : ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ವಿಯಷ ತಿಳಿಯುತ್ತಿದ್ದಂತೆ ಉಡುಪಿ ನಗರ ಪೊಲೀಸರು ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಜಿಲ್ಲಾ ಸರ್ಜನ್ ಹಾಗೂ ಹಿರಿಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದಿದ್ದರು. ಆದರೆ, ಕುಟುಂಬಸ್ಥರು ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ್ದಾರೆ..

Pregnant death
ಬಾಣಂತಿ ಸಾವು
author img

By

Published : Sep 25, 2021, 10:05 PM IST

ಉಡುಪಿ : ಹೆರಿಗೆ ವೇಳೆ ಗರ್ಭಿಣಿಯೊಬ್ಬರು ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಕುಟುಂಬಸ್ಥರು ಹಾಸ್ಪಿಟಲ್​​​ ಒಳಗೆ ನುಗ್ಗಲು ಪ್ರಯತ್ನಿಸಿದ ಘಟನೆ ನಗರದ ಬಿ ಆರ್ ಶೆಟ್ಟಿ ಉಚಿತ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟದ ನಿವಾಸಿ ಹೈಸ್ಕೂಲ್ ಶಿಕ್ಷಕಿಯಾಗಿದ್ದ ಉಷಾ ಎಂಬುವರು ಹೆರಿಗೆಗೆಂದು ಸರ್ಕಾರಿ ಸ್ವಾಮ್ಯದಲ್ಲಿರುವ ಉಡುಪಿಯ ಬಿ ಆರ್ ಶೆಟ್ಟಿ ಉಚಿತ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಆಸ್ಪತ್ರೆಯಲ್ಲಿ ಈಗಾಗಲೇ 11 ಸಾವಿರಕ್ಕೂ ಅಧಿಕ ಉಚಿತ ಹೆರಿಗೆಯಾಗಿವೆ. ಈ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಕುಟುಂಬಸ್ಥರು ಮಹಿಳೆಯನ್ನು ದಾಖಲಿಸಿದ್ದರು.

ಕೆಲ ದಿನಗಳ ಹಿಂದೆ ಸಿಸೇರಿಯನ್ ಅಗತ್ಯವಿಲ್ಲ. ಸಹಜವಾಗಿಯೇ ಹೆರಿಗೆ ನಡೆಸುತ್ತೇವೆ ಎಂದು ವೈದ್ಯರು ಭರವಸೆ ನೀಡಿದ್ದರು. ಆದರೆ, ಹೆರಿಗೆ ಸಮಯ ಬಂದಾಗ ನಮಗೆ ಚಿಕಿತ್ಸೆ ನೀಡುವುದಕ್ಕೆ ಆಗುವುದಿಲ್ಲ. ಮಣಿಪಾಲಕ್ಕೆ ಕೊಂಡೊಯ್ಯಿರಿ ಎಂದು ಹೇಳಿ ಕೈಚೆಲ್ಲಿದ್ದರಂತೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಉಷಾ ಅಸುನೀಗಿದ್ದಾರೆ.

ಕಳೆದ ಮೂರು ದಿನಗಳಿಂದ ಈ ಆಸ್ಪತ್ರೆಯಲ್ಲಿ ನಮ್ಮ ಮಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾರ್ಮಲ್ ಹೆರಿಗೆ ಸಾಧ್ಯವಿಲ್ಲ ಎಂದಾದರೆ ಸಿಸೇರಿಯನ್ ಮಾಡಬಹುದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕಷ್ಟ ಎಂದು ಮೊದಲೇ ತಿಳಿಸಿದ್ದರೆ ಮಣಿಪಾಲಕ್ಕೆ ಕರೆದುಕೊಂಡು ಹೋಗುತ್ತಿದ್ದೆವು. ಏನನ್ನೂ ಮಾಡದೆ ಇದೀಗ ಶವ ಮನೆಗೆ ಕೊಂಡೊಯ್ಯಬೇಕಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದರು.

ಬಾಣಂತಿಯ ಸಾವಿನಿಂದ ಆಕ್ರೋಶಗೊಂಡ ಸಂಬಂಧಿಕರು ಮತ್ತು ಗ್ರಾಮಸ್ಥರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟಿಸಿದ್ದಾರೆ. ಕಣ್ಣೀರಿಡುತ್ತಲೇ ಆಸ್ಪತ್ರೆಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಗೊಂದಲಮಯ ವಾತಾವರಣ ನಿರ್ಮಾಣಗೊಂಡಿತ್ತು.

ವಿಯಷ ತಿಳಿಯುತ್ತಿದ್ದಂತೆ ಉಡುಪಿ ನಗರ ಪೊಲೀಸರು ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಜಿಲ್ಲಾ ಸರ್ಜನ್ ಹಾಗೂ ಹಿರಿಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದಿದ್ದರು. ಆದರೆ, ಕುಟುಂಬಸ್ಥರು ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ್ದಾರೆ.

ಹೆರಿಗೆಯ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿ ಉಸಿರಾಟಕ್ಕೆ ಸಮಸ್ಯೆಯಾಗಿತ್ತು. ಮೂರ್ಛೆ ರೋಗದ ಲಕ್ಷಣಗಳು ಕಂಡು ಬಂದಿದ್ದವು. ತಕ್ಷಣವೇ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ರವಾನೆ ಮಾಡಲು ಹೇಳಿದ್ದೇವೆ.

ಇದೊಂದು ಆಕಸ್ಮಿಕ ಘಟನೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಇತ್ತ ಗಂಡು ಮಗುವಿಗೆ ಜನ್ಮ ನೀಡಿದ ಮರುಕ್ಷಣದಲ್ಲೇ ಸಂಭವಿಸಿದ ಈ ಸಾವು ಕುಟುಂಬಸ್ಥರನ್ನು ನೋವಿಗೆ ತಳ್ಳಿದ್ದರೆ, ನವಜಾತ ಶಿಶುವನ್ನು ಅನಾಥವಾಗಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.