ಉಡುಪಿ: ಕೊರೊನಾ ಆತಂಕದ ನಡುವೆಯೂ ನಾಳೆ ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಉಡುಪಿ ಜಿಲ್ಲಾಡಳಿತ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲು ಮುಂದಾಗಿದೆ.
ಜಿಲ್ಲೆಯ ಅಜ್ಜರಕಾಡು ಮೈದಾನದಲ್ಲಿ ಧ್ವಜಾರೋಹಣ ನಡೆಯಲಿದ್ದು, ಜಿಲ್ಲಾಧಿಕಾರಿ ಜಿ.ಜಗದೀಶ್ ಧ್ವಜಾರೋಹಣ ಮಾಡಲಿದ್ದಾರೆ. ಯಾವುದೇ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿರಲ್ಲ.
ಫೇಸ್ಬುಕ್ ನೇರ ಪ್ರಸಾರದ ಮೂಲಕ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.