ಉಡುಪಿ: ಮಾದಕ ವಸ್ತು ಮತ್ತು ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧಿಸುವಂತೆ ಒತ್ತಾಯಿಸಿ ಸಿಎಂಗೆ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ನಿಯೋಗದಿಂದ ಮನವಿ ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ ಮತ್ತು ಮಾದಕ ವಸ್ತು ನಿಷೇಧ ಮಾಡುವಂತೆ ಒತ್ತಾಯ ಮಾಡಲಾಗಿದೆ. ಉನ್ನತ ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಿಯೋಗಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.
ತನ್ನ ಕ್ಷೇತ್ರದ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಬಿಸಿ ಮುಟ್ಟಿಸಿದ ಶಾಸಕ ಸುಕುಮಾರ್ ಶೆಟ್ಟಿ, ಬೈಂದೂರು ಕ್ಷೇತ್ರದಲ್ಲಿಯೂ ಗಾಂಜಾ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮಧೂರು ಪರಿಸರದಲ್ಲಿ ಗಾಂಜಾ ಬೆಳೆ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿದ್ದಾರೆ.