ETV Bharat / state

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಿಂದ ಕೊಡಚಾದ್ರಿವರೆಗೆ ರೋಪ್ ವೇ! - ರೋಪ್ ವೇ ಲೆಟೆಸ್ಟ್ ನ್ಯೂಸ್

ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ರೋಪ್ ವೇ ನಿರ್ಮಾಣ ಪ್ರಸ್ತಾವನೆಗೆ ಜೀವ ಬಂದಿದೆ. ಕಾಮಗಾರಿಯ ಡಿ.ಪಿ.ಆರ್. ಸರ್ವೇ ಕಾರ್ಯಕ್ಕೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಿನ್ನೆ ಚಾಲನೆ ನೀಡಲಾಯ್ತು.

Rope Way from kolluru to Kodachadri
ಕೊಲ್ಲೂರು ಮೂಕಾಂಬಿಕೆ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ರೋಪ್ ವೇ
author img

By

Published : Sep 16, 2020, 6:57 AM IST

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರವಾದ ಉಡುಪಿಯ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ರೋಪ್ ವೇ ನಿರ್ಮಾಣ ಪ್ರಸ್ತಾವನೆಗೆ ಜೀವ ಬಂದಿದೆ. ಹೌದು, ಪ್ರವಾಸಿಗರು ತೆರಳಲು ಅತ್ಯಾಧುನಿಕ ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೋಪ್ ವೇ ಕಾಮಗಾರಿಯ ಡಿ.ಪಿ.ಆರ್. ಸರ್ವೇ ಕಾರ್ಯಕ್ಕೆ ನಿನ್ನೆ ಚಾಲನೆ ನೀಡಲಾಯ್ತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಕಾಮಗಾರಿಯ ಡಿ.ಪಿ.ಆರ್. ಸರ್ವೇ ಕಾರ್ಯಕ್ಕೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಚಾಲನೆ ನೀಡಿದ್ದಾರೆ. ದೇಶದಲ್ಲಿಯೇ ಅತಿ ಉದ್ದದ ರೋಪ್ ವೇ ಇದಾಗಿದ್ದು, ಯುರೋಪ್ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಇ.ಪಿ.ಐ.ಎಲ್ ಕಂಪನಿ ಈ ಸರ್ವೇ ಕಾರ್ಯ ನಡೆಸಲಿದೆ ಎಂದರು.

ರೋಪ್ ವೇ ಕಾಮಗಾರಿಯ ಡಿ.ಪಿ.ಆರ್. ಸರ್ವೇ ಕಾರ್ಯಕ್ಕೆ ಚಾಲನೆ

ಈ ವೇಳೆ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ, ಕೊಲ್ಲೂರು-ಕೊಡಚಾದ್ರಿ ರೋಪ್ ವೇ ಬಹು ವರ್ಷಗಳ ಕನಸಾಗಿದ್ದು, ಇದರಿಂದ ಪ್ರವಾಸೋದ್ಯಮ ಇನ್ನಷ್ಟು ವೃದ್ಧಿಸುತ್ತದೆ. ಯಾವುದೇ ಕಾರಣಕ್ಕೂ ಪರಿಸರ, ಅರಣ್ಯಗಳಿಗೆ ಹಾನಿಯಾಗದಂತೆ ವೈಜ್ಞಾ‌ನಿಕ ರೀತಿಯ ಕಾಮಗಾರಿ‌ ನಡೆಸಲಾಗುತ್ತದೆ. ರೋಪ್ ವೇ ನಿರ್ಮಾಣದಿಂದ ಕೊಲ್ಲೂರು ಭಾಗದ ಬಾಡಿಗೆ ಜೀಪು ಚಾಲಕರಿಗೆ ಸಮಸ್ಯೆಯಾಗುವುದಿಲ್ಲ. ಬದಲಾಗಿ ರೋಪ್ ವೇ ಆರಂಭವು ನಿರ್ದಿಷ್ಟ ಪ್ರದೇಶದಲ್ಲಿ ಆಗುವುದರಿಂದ ಜೀಪುಗಳ ಅವಶ್ಯಕತೆ ಮುಂದೆಯೂ ಇರಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.