ETV Bharat / state

ಆಕಸ್ಮಿಕ ಬೆಂಕಿ : ಎರಡು ಅಂಗಡಿಗಳಲ್ಲಿನ 3 ಲಕ್ಷಕ್ಕೂ ಅಧಿಕ ಸರಕು ಬೆಂಕಿಗಾಹುತಿ - ಸರಕು ಬೆಂಕಿಗೆ ಆಹುತಿ

ಉಡುಪಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಬುಧವಾರ ನಡೆದಿದೆ.

ಆಕಸ್ಮಿಕವಾಗಿ ಬೆಂಕಿ
ಆಕಸ್ಮಿಕವಾಗಿ ಬೆಂಕಿ
author img

By

Published : Sep 17, 2020, 12:17 AM IST

ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಸಂಪೂರ್ಣ ಸುಟ್ಟು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಬುಧವಾರ ನಡೆದಿದೆ.

ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ

ಇಲ್ಲಿನ ನಗರಸಭಾ ಕಟ್ಟಡದಲ್ಲಿ ಬುಧವಾರ ಮುಂಜಾನೆ ರಘುನಾಥ್ ರಾವ್ ಎಂಬವರಿಗೆ ಸೇರಿದ ಮಲ್ಲಿಕಾರ್ಜುನ್ ಸ್ಟೋರ್ಸ್ ಮತ್ತು ಮೊಬೈಲ್‌ ಕೇರ್ ಎಂಬ ಅಂಗಡಿಯಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಿಂದ ಅಂಗಡಿಗಳಲ್ಲಿರುವ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸುಮಾರು 3.5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಲು ಸಹಕರಿಸಿದೆ. ಸ್ಥಳಕ್ಕೆ ನಗರಸಭಾ ಸದಸ್ಯ ಟಿ.ಜಿ ಹೆಗ್ಡೆ, ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದೆರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.