ಉಡುಪಿ: ಒಂಟಿ ವೃದ್ಧೆಯ ಕೊಲೆ ಮಾಡಿ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಉಡುಪಿಯ ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ನಡೆದಿದೆ.
ಮಾಲತಿ ಕಾಮತ್ ಕೊಲೆಯಾದ ದುರ್ದೈವಿ. ವೃದ್ಧೆಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.