ETV Bharat / state

ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ.. ಆತ್ಮಹತ್ಯೆ - ETV Bharat Kannada

ಶಾಲೆಗೆ ಹೊರಡೋ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿನಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದಾರೆ.

sslc student commits suicide by pouring kerosene and setting herself on fire
ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
author img

By

Published : Aug 2, 2022, 10:49 AM IST

ಕುಂದಾಪುರ: ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬಾಸಿ ಸಮೀಪದ ಕೊರವಡಿಯಲ್ಲಿ ಸೋಮವಾರ ನಡೆದಿದೆ. ಕೋಟ ಪಡುಕರೆ ಪ್ರೌಢಶಾಲೆಯ 10ನೇ ತರಗತಿಯ ಅನನ್ಯಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ಕಂಡು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದರೂ ಗಂಭೀರವಾರ ಸುಟ್ಟ ಗಾಯದಿಂದಾಗಿ ಆಕೆ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.

ಬಾಲಕಿಯ ತಂದೆ, ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದು, ಅಜ್ಜಿ ಮತ್ತು ಚಿಕ್ಕಮ್ಮನ ಜೊತೆ ವಾಸ್ತವ್ಯ ಇದ್ದರು ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಭಟ್ಕಳದಲ್ಲಿ ಭಾರಿ ಮಳೆ : ಮನೆ ಮೇಲೆ ಗುಡ್ಡ ಕುಸಿತ, ನಾಲ್ವರು ಸಾವನ್ನಪ್ಪಿರುವ ಶಂಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.