ETV Bharat / state

ಹೋಂ ಕ್ವಾರಂಟೈನ್​​: ಮನನೊಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಆತ್ಮಹತ್ಯೆ - SSLC student suicide news

ಹೋಂ ಕ್ವಾರಂಟೈನ್​​ನಿಂದ ಮನನೊಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ನಡೆದಿದೆ.

ಮನನೊಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಆತ್ಮಹತ್ಯೆ

author img

By

Published : Jul 8, 2020, 11:15 AM IST

Updated : Jul 8, 2020, 5:33 PM IST

ಉಡುಪಿ: ಹೋಂ ಕ್ವಾರಂಟೈನ್ ಮಾಡಿದ್ದರಿಂದ ಮನಸಿಗೆ ಬೇಜಾರು ಮಾಡಿಕೊಂಡು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಿಂದ ವರದಿಯಾಗಿದೆ.

ಕಾರ್ತಿಕ್ ( 15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೋಟ ಖಾಸಗಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾರ್ತಿಕ್ ಹಾಗೂ ಆತನ ತಾಯಿ ಮನೆ ಕೆಲಸ ಮಾಡಿಕೊಂಡಿದ್ದರು. ಅವರು ಕೆಲಸ ಮಾಡುವ ಮನೆ ಮಾಲೀಕನಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಾಯಿ ಮಗನನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಇದೇ ವಿಚಾರವಾಗಿ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.

ಇನ್ನು ಮೃತನ ಕೊವೀಡ್ ವರದಿ ಬಂದ ಬಳಿಕ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 8, 2020, 5:33 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.