ETV Bharat / state

ಪೇಜಾವರ ಶ್ರೀಗಳಿಗೆ 'Y' ಭದ್ರತೆ ಕಲ್ಪಿಸಿದ ರಾಜ್ಯ ಸರ್ಕಾರ - ಉಡುಪಿ ಸುದ್ದಿ

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ನಿರತಾಗಿರುವ ವಿಶ್ವಸ್ಥ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ನೀಡಿದೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀ

author img

By

Published : Jan 1, 2021, 4:49 PM IST

ಉಡುಪಿ: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ವಿಶ್ವಸ್ಥ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ನೀಡಿದೆ.

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ನಿರತರಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ, ಸಮಾರಂಭ ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಸೂಕ್ತ ಭದ್ರತೆ ಒದಗಿಸುವ ವಿಚಾರವಾಗಿ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗು ಗೃಹಸಚಿವ ಬಸವರಾಜ ಬೊಮ್ಮಾಯಿ ಶ್ರೀಗಳಿಗೆ ವೈ ಶ್ರೇಣಿಯ ಭದ್ರತೆ ಒದಗಿಸಿದ್ದಾರೆ. ಸ್ವಾಮೀಜಿಯವರ ವಾಹನಕ್ಕೆ ಇನ್ನು ಮುಂದೆ ಒಂದು ಪೊಲೀಸ್ ಬೆಂಗಾವಲು ವ್ಯವಸ್ಥೆ ಇರಲಿದೆ.

ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.