ETV Bharat / state

ಕುಂದಾಪುರದಲ್ಲಿ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕ್ಲಾಸಿಗೆ ನೋ ಎಂಟ್ರಿ.. ಕುಳಿತುಕೊಳ್ಳಲು ಪ್ರತ್ಯೇಕ ಕೊಠಡಿ!

ಹಿಜಾಬ್​ ಧರಿಸಿದ ವಿದ್ಯಾರ್ಥಿಗಳು ಇಂದು ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಕ್ಯಾಂಪಸ್‌ಗೆ ಬಂದಿದ್ದು, ಅವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ನಾಳೆ ಹೈಕೋರ್ಟ್​ನಲ್ಲಿ ಈ ವಿವಾದದ ವಿಚಾರಣೆ ನಡೆಯಲಿದೆ.

ಕುಂದಾಪುರದ ಪಿಯು ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು

author img

By

Published : Feb 7, 2022, 10:41 AM IST

Updated : Feb 7, 2022, 2:02 PM IST

ಉಡುಪಿ: ವಸ್ತ್ರಸಂಹಿತೆ ಬಗ್ಗೆ ಸರ್ಕಾರದ ಆದೇಶವಿದ್ದರೂ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿನಿಯರು ಹಿಜಾಬ್ ತೊಟ್ಟು ಕಾಲೇಜಿಗೆ ಬಂದಿದ್ದಾರೆ. ಇಂದು ಕಾಲೇಜಿನ ಆವರಣದೊಳಗೆ ಪ್ರವೇಶ ನೀಡಲಾಗಿದೆ. ಆದರೆ ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನೀಡಿಲ್ಲ ಬದಲಾಗಿ ಕುಳಿತುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ತೆಗೆದು ಕ್ಲಾಸಿನಲ್ಲಿ ಕುಳಿತುಕೊಳ್ಳುವಂತೆ ಪರಿಪರಿಯಾಗಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯರು, ನಾವು ಹಿಜಾಬ್ ತೆಗೆಯಲ್ಲ, ನಮಗೆ ನಮ್ಮ ಮನೆಯಲ್ಲಿ ಹೇಳಿದ್ದಾರೆ ಎಂದಿದ್ದಾರೆ.

ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ

ಕಾಲೇಜು ಆವರಣದಲ್ಲಿರುವ ಪ್ರತ್ಯೇಕ ಕೊಠಡಿಯಲ್ಲಿ ವಿದ್ಯಾರ್ಥಿನಿಯರು ಕುಳಿತುಕೊಂಡಿದ್ದಾರೆ. ಮಂಗಳವಾರ ಹೈಕೋರ್ಟ್​ ಆರ್ಡರ್ ಬರಲಿದೆ. ಮುಂದಿನ ನಡೆ ಏನು ಎಂಬುದನ್ನು ಆಮೇಲೆ ನಿರ್ಧರಿಸುತ್ತೇವೆ ಎಂದು ಹಿಜಾಬ್ ತೊಟ್ಟು ಬಂದ ವಿದ್ಯಾರ್ಥಿನಿಯರು ಹೇಳಿದ್ದಾರೆ.

ವಿದ್ಯಾರ್ಥಿನಿಯರು ಕಳೆದ ವಾರ ಗೇಟಿನಿಂದ ಹೊರಗೆ ಕುಳಿತು ಪ್ರತಿಭಟಿಸಿದ್ದರು. ವಸ್ತ್ರಸಂಹಿತೆ ಕುರಿತು ಸರ್ಕಾರದ ಆದೇಶದ ಪ್ರತಿಯನ್ನು ಪದವಿ ಪೂರ್ವ ಕಾಲೇಜು ಗೇಟಿನಲ್ಲಿ ಅಳವಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಲಿದ್ದು, ನ್ಯಾಯಾಲಯದಲ್ಲಿ ಯಾವ ತೀರ್ಪು ಬರಲಿದೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

(ವಿಜಯಪುರದಲ್ಲೂ ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು)

Last Updated : Feb 7, 2022, 2:02 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.