ಉಡುಪಿ: ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿ ಮುಖ್ಯ ದ್ವಾರವನ್ನೇ ಬದಲಾವಣೆ ಮಾಡುವ ನಿರ್ಧಾರದ ಕುರಿತು ವಾಗ್ವಾದ ನಡೆದಿದೆ. ಉಡುಪಿಯ ತೆಂಕನಿಡಿಯೂರು ಗ್ರಾಮ ಪಂಚಾಯಿತಿಯ ಮುಖ್ಯ ದ್ವಾರ ನಿರ್ಮಾಣ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡದೇ ಮುಖ್ಯ ದ್ವಾರ ಬದಲಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವಿಚಾರವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಂದಿದ್ದರು.
ಇದೇ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ದೂರು ನೀಡಲು ಬಂದ ಗ್ರಾಮಸ್ಥರಿಗೆ ಪಂಚಾಯತ್ ಅಧ್ಯಕ್ಷೆ ಹೊರಗೆ ಹೋಗಲು ಹೇಳಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಬೆಂಬಲಿತ ಸದಸ್ಯರು ಪಂಚಾಯತ್ಗೆ ದಿಢೀರ್ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಇದನ್ನೂ ಓದಿ: ಕಟೀಲ್ಗೆ ಪ್ರಾರ್ಥಿಸಿದ ಪೆನ್ನು ಕೊಟ್ಟ ವಿನಯ್ ಗುರೂಜಿ.. ಭದ್ರವಾಗಲಿದೆಯಾ ರಾಜ್ಯಾಧ್ಯಕ್ಷರ ಪಟ್ಟ!