ಉಡುಪಿ: ಜಿಲ್ಲೆಯಲ್ಲಿ ಆರಂಭವಾಗಿರುವ ಹಿಜಾಬ್ ವಿವಾದವನ್ನು ಆದಷ್ಟು ಬೇಗ ಕೊನೆಗೊಳಿಸುವಂತೆ ಇತರ ವಿದ್ಯಾರ್ಥಿನಿಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತದ ಮೊರೆ ಹೋಗಿರುವ ಕಾಲೇಜಿನ ಇತರ ವಿದ್ಯಾರ್ಥಿನಿಯರು, ಈ ವಿವಾದದಿಂದ ನಮ್ಮ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ. ಪರೀಕ್ಷಾ ಸಮಯದಲ್ಲಿ ಕಾಲೇಜಿನಲ್ಲಿ ಕಲಿಕೆಯ ಬದಲಾಗಿ ಗಲಾಟೆ ಆರಂಭವಾಗಿದೆ. ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಶಾಲೆಯ ಆವರಣಕ್ಕೆ ನಿತ್ಯವೂ ಪೊಲೀಸರು ಮತ್ತು ಮಾಧ್ಯಮದವರು ಬರುತ್ತಿದ್ದಾರೆ.
ಇದನ್ನೂ ಓದಿ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು.. ಕಾಲೇಜ್ ಗೇಟ್ ಬಂದ್ ಮಾಡಿದ ಪ್ರಾಂಶುಪಾಲ
ನಮ್ಮ ಕಾಲೇಜಿಗೆ ಹಲವಾರು ದಶಕಗಳ ಇತಿಹಾಸವಿದೆ. ಇಲ್ಲಿ ಯಾವುದೇ ರೀತಿಯ ತಾರತಮ್ಯ ಅನ್ಯಾಯ ನಡೆಯುತ್ತಿಲ್ಲ. ವಿನಾಕಾರಣ ವಿವಾದ ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸಿದ್ದಾರೆ. ಇದರ ಬಗ್ಗೆ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಾಲೇಜಿನ ಇತರ ವಿದ್ಯಾರ್ಥಿನಿಯರು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ.