ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವಿಪರಿತವಾಗಿ ಹಬ್ಬಲು ಕ್ವಾರಂಟೈನ್ ಸೆಂಟರ್ ಕಾರಣ ಎಂದು ಆರೋಪಿಸಿ, ಮಹಾರಾಷ್ಟ್ರದಿಂದ ಬಂದವರು ವಾಟ್ಸ್ಆ್ಯಪ್, ಫೇಸ್ಬುಕ್ನಲ್ಲಿ ಸಂದೇಶ ಹರಿಬಿಡಲಾಗುತ್ತಿದೆ.
ಕ್ವಾರಂಟೈನ್ ಸಂದರ್ಭದಲ್ಲಿ ಟಾಯ್ಲೆಟ್, ಬಾತ್ ರೂಂ ವ್ಯವಸ್ಥೆ ಸರಿ ಇರಲಿಲ್ಲ ಎಂದು ಆರೋಪಿಸಿ ವಾಟ್ಸ್ಆ್ಯಪ್, ಫೇಸ್ಬುಕ್ನಲ್ಲಿ ಮಹಾರಾಷ್ಟ್ರದಿಂದ ಬಂದವರು ಸಂದೇಶ ಹರಿಬಿಡಲಾಗುತ್ತಿದೆ. ಅಲ್ಲದೇ ಕೊರೊನಾ ಟ್ರೀಟ್ಮೆಂಟ್ಗೆ 3 ಲಕ್ಷದ 50ಸಾವಿರ ರೂ. ವಸೂಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿ, ಬೈಂದೂರು ತಾಲೂಕಿನಲ್ಲಿ ಅತೀ ಹೆಚ್ಚು ಕೊರೊನಾ ಕೇಸ್ ಬಂದಿದೆ. ಈ ಬಗ್ಗೆ ನಮಗೆ ವಿಷಾದ ಇದೆ. ಆದರೆ ಕೊರೊನಾ ಸೋಂಕು ಸಮುದಾಯಕ್ಕೆ ಹಬ್ಬಿಲ್ಲ. ಜನ ಆತಂಕಗೊಳ್ಳುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ಹತೋಟಿಗೆ ಬರಲಿದೆ. ಸೋಂಕಿತ ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆಗೆ 3ಲಕ್ಷ 20 ಸಾವಿರ ರೂ. ವಸೂಲಿ ಮಾಡಿದ್ದೇವೆ ಎಂಬುದು ಸುಳ್ಳು ಸುದ್ದಿ. ಮುಂದಿನ ಚಿಕಿತ್ಸೆ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ತೀರ್ಮಾನಿಸುತ್ತದೆ ಎಂದಿದ್ದಾರೆ.