ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ಗೆ ಪ್ರವಾಸಕ್ಕೆಂದು ಬಂದಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ನೀರುಪಾಲಾದವರು ಎಂದು ತಿಳಿದುಬಂದಿದೆ. 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆ ಬಂದಿದ್ದರು.
ಇದನ್ನೂ ಓದಿ:ಕಾರವಾರ: ಮಹಿಳೆ ಮೃತದೇಹ ಪತ್ತೆ, ಪ್ರಿಯಕರನಿಂದ ಕೊಲೆ ಶಂಕೆ
ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ಶೆಣೈ ಮುಳುಗಡೆಯಾಗಿದ್ದಾರೆ. ಅಂಟೋನಿ ಶೆಣೈಗೆ ಶೋಧ ಮುಂದುವರಿದಿದೆ. ಪ್ರವಾಸಿಗರ ನಿರ್ಲಕ್ಷ್ಯ ಧೋರಣೆ ಹಾಗೂ ಬೀಚ್ ಅಭಿವೃದ್ಧಿ ಸಮಿತಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.