ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜೋರು ಮಳೆ ಸುರಿಯುತ್ತಿದ್ದು ನಿನ್ನೆ ಸಂಜೆಯಿಂದ ಭಾರೀ ಗಾಳಿಯೂ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ (ಅ.25) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಜಗದೀಶ್ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಪ್ರಕಟಿಸಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ (ತೀವ್ರ ಮಳೆ) ಘೋಷಿಸಲಾಗಿತ್ತು.