ETV Bharat / state

ಉಡುಪಿ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶ ಮುಂದೂಡಿಕೆ: ವಿನಯ ಕುಮಾರ್ ಸೊರಕೆ - ಉಡುಪಿ ಬಿಲ್ಲವ ಮುಸ್ಲಿಂ ಸ್ನೇಹ ಸಮಾವೇಶ

ಜಿಲ್ಲಾ ಮುಸ್ಲಿಂ ಒಕ್ಕೂಟವು ಜ.11ರಂದು ಹಮ್ಮಿಕೊಂಡಿದ್ದ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶವು ಮುಂದೂಡಲ್ಪಟ್ಟಿದೆ.

ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶ ಮುಂದೂಡಿಕೆ, Udupi Billava-Muslim friendship Convention Postponed
ವಿನಯ್ ಕುಮಾರ್ ಸೊರಕೆ
author img

By

Published : Jan 8, 2020, 9:32 PM IST

ಉಡುಪಿ: ಜಿಲ್ಲಾ ಮುಸ್ಲಿಂ ಒಕ್ಕೂಟವು ಜ.11ರಂದು ಹಮ್ಮಿಕೊಂಡಿದ್ದ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ವಿನಯ್ ಕುಮಾರ್ ಸೊರಕೆ

ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ, ಸೌಹಾರ್ಧತೆ ವೃದ್ಧಿ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಸಮಾವೇಶ ಆರಂಭಕ್ಕೂ ಮುನ್ನವೇ ಕೆಲವರಿಂದ ರಾಜಕೀಯ ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಭಟನೆ ನಡೆಸುವ ಹಾಗೂ ಬೆದರಿಕೆ ಹಾಕುವ ಕಾರ್ಯ ನಡೆಯುತ್ತಿದೆ. ಆದರೆ ಈ ಸಮಾವೇಶದ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ, ಅಲ್ಲದೆ ಬೆದರಿಕೆಗೆ ನಾವು ಹೆದರಿ ಈ ಸಮಾವೇಶವನ್ನು ಮುಂದೂಡಿಲ್ಲ, ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಸಮಾವೇಶವನ್ನು ನಡೆಸುವುದು ಸೂಕ್ತವಲ್ಲವೆಂದು ಸಮಾವೇಶದ ಸ್ವಾಗತ ಸಮಿತಿಯು ನಿರ್ಣಯ ತೆಗೆದುಕೊಂಡಿದೆ. ಅಲ್ಲದೆ ಸಮಾವೇಶವನ್ನು ಮುಂದೊಮ್ಮೆ ನಡೆಸುವ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.

Intro:kn_udp_04_08_billava_muslim_samavesha_sorake_byte_HD

Body:kn_udp_04_08_billava_muslim_samavesha_sorake_byte_HD

Conclusion:kn_udp_04_08_billava_muslim_samavesha_sorake_byte_HD
ETV Bharat Logo

Copyright © 2025 Ushodaya Enterprises Pvt. Ltd., All Rights Reserved.