ಉಡುಪಿ: ಜಿಲ್ಲೆಯಲ್ಲಿ ಎರಡು ವಾರಗಳ ಕಾಲ ಬಸ್ ಸಹಿತ ಸಾರ್ವಜನಿಕ ವಾಹನಗಳ ಸಂಚಾರವನ್ನು ಬಂದ್ ಮಾಡಿದ್ದೇವೆ. ಜನರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ತಿಳಿಸಿದ್ದಾರೆ.
ಎರಡು ತಿಂಗಳುಗಳ ಕಾಲ ಬಸ್ ಸಂಚಾರಕ್ಕೆ ಅನುಮತಿಸಲಾಗಿತ್ತು. ಆದರೆ, ಜನರು ಸಂಜೆ ಹೊತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರಯಾಣ ಮಾಡುತ್ತಿದ್ದರ ಬಗ್ಗೆ ದೂರುಗಳು ಬರುತ್ತಿದ್ದವು. ಈ ಸಂಬಂಧ ಸುಮಾರು 25 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದನ್ನೆಲ್ಲ ಮನಗಂಡು ಜನರ ಹಿತದೃಷ್ಟಿಯಿಂದ ಸಾರ್ವಜನಿಕ ಸಂಚಾರ ಬಂದ್ ಮಾಡಿದ್ದೇವೆ. ಇನ್ನೂ ಎರಡು ವಾರಗಳ ಕಾಲ ಬಸ್ ಸಂಚಾರ ಇರುವುದಿಲ್ಲ. ಜನರು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಡಿಸಿ ಮನವಿ ಮಾಡಿದರು.