ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ಹಕ್ಕಿಗಾಗಿ ಹೋರಾಟ ಮುಂದುವರೆದಿದ್ದು, ಹಿಜಾಬ್ ಧರಿಸಿಕೊಂಡು ತಮಗೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಿಲ್ಲ ಎಂದು ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಲ್ಮಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಮೂಲಕ ಕಾಲೇಜು ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿದ್ಯಾರ್ಥಿನಿ, ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ನಾವು ವಿಜ್ಞಾನದ ರೆಕಾರ್ಡ್ ಬುಕ್ ಪೂರ್ಣಗೊಳಿಸಿದ್ದೇನೆ. ಅಪಾರ ನಿರೀಕ್ಷೆಯೊಂದಿಗೆ ನಾವು ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗಿದ್ದೆವು. ನಮ್ಮ ಪ್ರಾಂಶುಪಾಲರು ನಮಗೆ ಪರೀಕ್ಷೆ ಬರೆಯುವ ಅವಕಾಶ ಕೊಡಲಿಲ್ಲ. 5 ನಿಮಿಷದಲ್ಲಿ ಜಾಗ ಖಾಲಿ ಮಾಡದಿದ್ದರೆ ಪೊಲೀಸ್ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಸಚಿವ ಗಡ್ಕರಿ ಹಾಡಿ ಹೊಗಳಿದ ಖರ್ಗೆ.. ಸಾವಿನ ದಾರಿಗೆ ಮುಕ್ತಿ: ಟೋಲ್ ಫ್ರೀ ಮೂಲಕ ವಿಶೇಷ ಸೇವೆ.. ಸಚಿವ ಜೋಶಿ ವಿಶ್ವಾಸ
ಅಂದುಕೊಂಡಂತೆ ನಡೆದಿದ್ದರೆ ನಾವು ಲ್ಯಾಬ್ ಪರೀಕ್ಷೆ ಬರೆದು ಮುಗಿಸಬೇಕಿತ್ತು. ಆದರೆ ಹಿಜಾಬ್ ಕುರಿತಾದ ಗೊಂದಲದಿಂದ ಈ ಪರಿಸ್ಥಿತಿ ನಮಗೆ ಬಂದೊದಗಿದೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ. ಅಲ್ಲದೆ, ಘಟನೆ ಬಗ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾಳೆ.