ಉಡುಪಿ: ಕೊರೊನಾ ವಿರುದ್ಧ ಸಾರ್ವಜನಿಕರು ಎಚ್ಚರದಿಂದ ಇರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೊರೊನಾ ವೈರಸ್ ಹರಡದಂತೆ ತಡೆಯಲು ಇರುವ ಪ್ರಮುಖ ಅಸ್ತ್ರ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಜಿಲ್ಲೆಯಲ್ಲಿ ಕೆಲವು ಕಡೆ ಸಾಮಾಜಿಕ ಅಂತರವಿಲ್ಲದೇ ಓಡಾಡುತ್ತಿದ್ದಾರೆ. ಮಾಸ್ಕ್ ಹಾಕದಿರುವುದು ಕೂಡ ಕಂಡು ಬಂದಿದೆ. ಕೇಂದ್ರ ಸರ್ಕಾರದ ಆದೇಶವನ್ನು ಜಿಲ್ಲೆಯ ಕೆಲವು ಕಡೆಗಳಲ್ಲಿ ಪಾಲಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕರು ಮಾಸ್ಕ್ ಹಾಕದೆ ಹೊರಗೆ ಬಂದರೆ ದಂಡ ಹಾಕಲಾಗುತ್ತದೆ. ಇದನ್ನೂ ಮೀರಿ ವರ್ತಿಸಿದರೆ, ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕೃಷ್ಣ ನಗರಿಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಶನಿವಾರ ಕೂಡ 13 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಎಲ್ಲಾ ಲ್ಯಾಬ್ಗಳ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ ಎಂದರು.