ETV Bharat / state

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನೆ ಆರೋಪ: ಉಡುಪಿಯಲ್ಲಿ ಕಾಲೇಜು ಪಿಆರ್​ಒ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ - ಉಡುಪಿಯ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ ನಗರದಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಪಿಆರ್​​ಒ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

Udupi Hegde college students are protest against PRO
ಉಡುಪಿಯ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
author img

By

Published : Feb 24, 2022, 4:13 PM IST

ಉಡುಪಿ: ನಗರದ ಖಾಸಗಿ ಕಾಲೇಜೊಂದರ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿಆರ್​ಒ) ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದರು.

ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪಿಆರ್​ಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲರಾದ ಉಮೇಶ್​ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ಸ್ಥಳಕ್ಕೆ ಕರೆಸುವಂತೆ ಒತ್ತಾಯಿಸಿದರು.

ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಆದರೂ ವಿದ್ಯಾರ್ಥಿಗಳು ಕಾಲೇಜು ಆಡಳಿತ‌ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ‌ ಕರೆಸುವಂತೆ‌ ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: ಹಿಟ್ ಅಂಡ್​​ ರನ್ ಮಾಡಿ ವೃದ್ದೆ ಸಾವಿಗೆ ಕಾರಣವಾಗಿದ್ದ ಕಾರು ಚಾಲಕನ ಬಂಧನ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.