ಉಡುಪಿ: ಜೂನ್ 8 ರ ನಂತರ ದೇವಸ್ಥಾನ ತೆರೆಯಲು ಸರ್ಕಾರ ಅವಕಾಶ ಕೊಟ್ಟಿದೆ. ಆದರೆ ನಾವು ಇನ್ನೂ 20 ರಿಂದ 30 ದಿನ ಕಾಯುತ್ತೇವೆ ಎಂದು ಕೃಷ್ಣಮಠದ ಪರ್ಯಾಯ ಅದಮಾರು ಕಿರಿಯ ಸ್ವಾಮೀಜಿ ಅದಮಾರು ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಭಕ್ತರ ಮತ್ತು ಕೃಷ್ಣ ಮಠದ ಸಿಬ್ಬಂದಿಯ ಆರೋಗ್ಯ ಮುಖ್ಯ. ಕೃಷ್ಣ ಮಠದಲ್ಲಿ ಬಹಳ ಹಿಂದಿನಿಂದ ನಡೆದುಕೊಂಡ ಬಂದಿರುವ ಪರಂಪರೆ ಇದೆ. ಯತಿಗಳು ಪೂಜೆ ಮಾಡಿಕೊಂಡು ಬರುವ ಸಂಪ್ರದಾಯ ಇದೆ. ಶ್ರೀಕೃಷ್ಣ ಮಠಕ್ಕೆ ಪ್ರತಿದಿನ 1 ಲಕ್ಷ ರೂಪಾಯಿ ಖರ್ಚು ಇದೆ.
ಲಾಕ್ಡೌನ್ ಸಂದರ್ಭದಲ್ಲಿ ನಮ್ಮೆಲ್ಲ ಸಿಬ್ಬಂದಿಗೆ ಸಂಬಳ ಕೊಡುತ್ತಿದ್ದೇವೆ. ಕೊರೊನಾ ಸೋಂಕು ಶೀಘ್ರ ದೂರವಾಗಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯ ಶ್ಲಾಘನೀಯ ಎಂದು ಶ್ರೀಗಳು ತಿಳಿಸಿದ್ದಾರೆ.