ಉಡುಪಿ: ಇಲ್ಲಿನ ಮಲ್ಪೆ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರ ನಗರದ ಶಾಲೆಯ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಮೃತ ಯುವಕನನ್ನು ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರ ನಿವಾಸಿ ಯೋಗಿಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ವಕ್ವಾಡಿ ಪ್ರವೀಣ್ ಹತ್ಯೆಯ ಆರೋಪಿಗಳಾದ ಸುಜಿತ್ ಪಿಂಟೋನ 5-6 ಮಂದಿ ಸಹಚರರು ಕ್ಷುಲ್ಲಕ ವಿಷಯಕ್ಕಾಗಿ ಯೋಗಿಶ್ ಪೂಜಾರಿಯ ಜೊತೆ ಲಕ್ಷ್ಮೀನಗರದಲ್ಲಿ ಸೋಮವಾರ ರಾತ್ರಿ ಗಲಾಟೆ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಯೋಗಿಶ್ನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಯೋಗೀಶ್ ಪೂಜಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.