ಉಡುಪಿ: ಜಿಲ್ಲೆಯ ಸಮಾಜ ಸೇವಕರೊಬ್ಬರು ಕೊರೊನಾ ಲಾಕ್ಡೌನ್ನಿಂದಾಗಿ ಊಟವಿಲ್ಲದೇ ಕಂಗಾಲಾಗಿರುವ ತೃತೀಯ ಲಿಂಗಿಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದ್ದಾರೆ.
ಕೊರೊನಾ 2ನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿಯೂ ಸೋಂಕು ಹೆಚ್ಚುತ್ತಿರುವುದರಿಂದ 15 ದಿನಗಳ ಕಾಲ ಕಠಿಣ ಲಾಕ್ಡೌನ್ ಘೋಷಿಸಲಾಗಿದೆ. ಇದರಿಂದ ಬಡವರು, ನಿರ್ಗತಿಕರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಲಾಕ್ಡೌನ್ನಿಂದಾಗಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಲಿಂಗಿಗಳು ಅತಂತ್ರರಾಗಿದ್ದಾರೆ. ಉಡುಪಿಯಲ್ಲಿ ಒಂದೊತ್ತು ಊಟಕ್ಕೂ ಪರದಾಡುತ್ತಿದ್ದ ತೃತೀಯ ಲಿಂಗಿಗಳಿಗೆ ಆಹಾರ ಧಾನ್ಯಗಳ ಕಿಟ್ ನೀಡಿ ಸಮಾಜ ಸೇವಕ ವಿಶು ಶೆಟ್ಟಿ ನೆರವಾಗಿದ್ದಾರೆ. ಇವರು ಕಳೆದ ವರ್ಷದಿಂದಲೂ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಜನರಿಗೆ ಸಹಾಯ ಮಾಡುತ್ತಿದ್ದಾರೆ.
ಓದಿ: ವ್ಯಾಕ್ಸಿನ್ ಲಭ್ಯತೆ ಇಲ್ಲ.. ದಾಸ್ತಾನು ಇಂದಿಗೆ ಮುಗಿಯಲಿದೆ : ಗೌರವ್ ಗುಪ್ತ