ಉಡುಪಿ: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸುವ 'CSIR INNOVATIVE AWARD FOR SCHOOL CHILDREN-2021' ಎಂಬ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.
ಈ ಶಾಲೆಯ ಅನುಷಾ ಹಾಗೂ ರಕ್ಷಿತಾ ನಾಯ್ಕ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಆನ್ಲೈನ್ ಮೂಲಕ ಪ್ರಶಸ್ತಿ ಸ್ವೀಕರಿಸಿದರು. ಸ್ಪರ್ಧೆಯ ಕೊನೆಯ ಹಂತಕ್ಕೆ ಆಯ್ಕೆಯಾದ ದೇಶದ 14 ಶಾಲೆಗಳಲ್ಲಿ 'ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ' ದೇಶದಲ್ಲೇ ಆಯ್ಕೆಯಾದ ಏಕೈಕ ಸರಕಾರಿ ಶಾಲೆಯಾಗಿದೆ.
ಸಮಾಜ ವಿಜ್ಞಾನ ಶಿಕ್ಷಕರಾದ ಸುರೇಶ ಮರಕಾಲ ಹಾಗೂ ವಿಜ್ಞಾನ ಶಿಕ್ಷಕಿ ವೈಶಾಲಿ ರಾವ್ ಮಾರ್ಗದರ್ಶನದಲ್ಲಿ ಅನುಷಾ ಹಾಗೂ ರಕ್ಷಿತಾ ನಾಯ್ಕ ಇವರು ರಚಿಸಿದ 'GSK' (GAS SAVING KIT) ಎಂಬ ಅತ್ಯಂತ ಸರಳ ಉಪಕರಣವು ರಾಷ್ಟ್ರಮಟ್ಟದ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದೆ.
ಇದನ್ನೂ ಓದಿ:ರಾಜ್ಯದ ಮೊದಲ ಎಲೆಕ್ಟ್ರಿಕ್ ಬಸ್ ಓಡಾಟಕ್ಕೆ ಸಿದ್ಧ: ಏನಿದರ ವಿಶೇಷತೆ?