ಉಡುಪಿ : ನಗರದ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ. ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆರೋಪಿತ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ.
-
VIDEO | "Those who are trying to give a communal colour to this, let me tell them that NCW is an autonomous body. We work for the women of this country under the Government of India, NCW does not work under a political party. Government of India is committed to protect women of… pic.twitter.com/hqAD6gmb55
— Press Trust of India (@PTI_News) July 26, 2023 " class="align-text-top noRightClick twitterSection" data="
">VIDEO | "Those who are trying to give a communal colour to this, let me tell them that NCW is an autonomous body. We work for the women of this country under the Government of India, NCW does not work under a political party. Government of India is committed to protect women of… pic.twitter.com/hqAD6gmb55
— Press Trust of India (@PTI_News) July 26, 2023VIDEO | "Those who are trying to give a communal colour to this, let me tell them that NCW is an autonomous body. We work for the women of this country under the Government of India, NCW does not work under a political party. Government of India is committed to protect women of… pic.twitter.com/hqAD6gmb55
— Press Trust of India (@PTI_News) July 26, 2023
ಆರೋಪಿತ ವಿದ್ಯಾರ್ಥಿನಿಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳಾದ 509, 204 ,175 ,34, 66(ಇ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರ ಜೊತೆಗೆ ಕಾಲೇಜು ಆಡಳಿತ ಮಂಡಳಿಯನ್ನೂ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.
"ಮಾರ್ಫಿಂಗ್ ಮಾಡಿದ ವಿಡಿಯೊವೊಂದನ್ನು ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿದೆ. ಮಹಿಳೆಯೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲೂ ಇದನ್ನು ಪೋಸ್ಟ್ ಮಾಡಿದ್ದಾರೆ. ಕೋಮು ದ್ವೇಷ ಹಾಗೂ ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಆರೋಪದ ಮೇಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿಗೆ ಆಗಮಿಸಿದ ಖುಷ್ಬೂ ಸುಂದರ್ : ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಉಡುಪಿಗೆ ಆಗಮಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, "ವಿದ್ಯಾರ್ಥಿನಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿಚಾರಿಸಲು ಇಲ್ಲಿಗೆ ಬಂದಿದ್ದೇನೆ. ಮೊದಲು ಪೊಲೀಸರನ್ನು ಭೇಟಿ ಮಾಡಿ ವಿವರಗಳನ್ನು ಪಡೆಯುತ್ತೇನೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಯರನ್ನೂ ಮಾತನಾಡಿಸುತ್ತೇನೆ. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುತ್ತೇನೆ" ಎಂದರು.
"ಮೊದಲು ನಾನು ಪ್ರಕರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕು. ಎರಡು ದಿನ ಇಲ್ಲೇ ಇರುತ್ತೇನೆ. ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತರು ಹಾಗೂ ಕಾಲೇಜು ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತೇನೆ'' ಎಂದು ಖುಷ್ಬೂ ಹೇಳಿದರು.
ಗೃಹ ಸಚಿವರು ಹೇಳಿದ್ದೇನು?: ಈ ಬಗ್ಗೆ ಗುರುವಾರ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, "ಬಿಜೆಪಿಯವರು ಸಣ್ಣಸಣ್ಣ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದರು.
ಬೊಮ್ಮಾಯಿ ಪ್ರಶ್ನೆ: ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, "ಸಣ್ಣ ವಿಷಯ ಎಂದಾದರೆ ಎಫ್‌ಐಆರ್ ಏಕೆ ದಾಖಲಿಸಲಾಗಿದೆ?. ವಿದ್ಯಾರ್ಥಿನಿಯರಿಂದ ಯಾಕೆ 'ತಪ್ಪೊಪ್ಪಿಗೆ ಪತ್ರ' ಪಡೆಯಲಾಗಿದೆ. ಆ ವಿದ್ಯಾರ್ಥಿಗಳನ್ನು ಏಕೆ ಅಮಾನತುಗೊಳಿಸಲಾಯಿತು ಎಂಬ ಪ್ರಶ್ನೆಗಳಿಗೆ ಗೃಹ ಸಚಿವರು ಉತ್ತರಿಸಬೇಕು" ಎಂದು ಒತ್ತಾಯಿಸಿದ್ದಾರೆ.
ಎಸ್ಪಿ ಪ್ರತಿಕ್ರಿಯೆ: ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ, "ವಿಡಿಯೋ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ನಾವು ಪರಿಶೀಲನೆ ನಡೆಸಿದ್ದು, ಈವರೆಗೂ ನಮಗೆ ಅಂತಹ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ" ಎಂದಿದ್ದರು. ಹಿಡನ್ ಕ್ಯಾಮೆರಾ ಬಳಸಲಾಗಿದೆ ಎಂದು ಸುದ್ದಿಯಾಗಿದೆ. ಈ ಬಗ್ಗೆಯೂ ನಮ್ಮ ಗಮನಕ್ಕೆ ಬಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡದಂತೆ ಅವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಉಡುಪಿ ವಿಡಿಯೋ ಪ್ರಕರಣ: ಕಾಲೇಜು ಆಡಳಿತ ಮಂಡಳಿ, ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ