ಉಡುಪಿ: ನೋಟಾ ಮತ ಹಾಕುವಂತೆ ಪ್ರಭಾವ ಬೀರುವುದು ಅಪರಾಧ. ನೋಟಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಕೊಡುವಂತಿಲ್ಲ. ನೋಟಾ ಒಂದು ಆಯ್ಕೆ ಮಾತ್ರ ಎಂದು ಉಡುಪಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಕೆ ನಿಡಿದ್ದಾರೆ.
ನೋಟಾ ಮತ ಹಾಕಿ ಅನ್ನುವುದು ಕಾನೂನು ಬಾಹಿರ. ಸಾಮಾಜಿಕ ಜಾಲತಾಣದಲ್ಲಿ ನೋಟಾ ಅಭಿಯಾನ ಮಾಡುವಂತಿಲ್ಲ. ನೋಟಾ ದೇಶದ ಮತದಾರರ ವೈಯಕ್ತಿಕ ಹಕ್ಕು. ನೋಟಾ ಬಗ್ಗೆ ಯಾರೂ ಎಲ್ಲೂ ಪ್ರಚಾರ ಕೊಡಬಾರದು. ನೋಟಾ ಬಗ್ಗೆ ಮಾಹಿತಿ ನೀಡುವ ಅವಕಾಶ ಇದೆ ಅಂತಾ ಉಡುಪಿಯಲ್ಲಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಹೇಳಿದ್ದಾರೆ.
ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ನೋಟಾ ಅಭಿಯಾನ ನಡೆಯುತ್ತಿದ್ದು, ಫೇಸ್ಬುಕ್, ವಾಟ್ಸಪ್ನಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.