ಉಡುಪಿ : ಕೋವಿಡ್ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೆ ಮಾಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ಬಳಿಕ ಜಿಲ್ಲೆ ಬಹುತೇಕ ಸ್ತಬ್ಧವಾಗಿದೆ.
ಜಿಲ್ಲೆಯಲ್ಲಿ ಎರಡು ಗಂಟೆಯವರೆಗೂ ಅಗತ್ಯ ವಸ್ತುಗಳ ಮಾರಾಟಕ್ಕೆ ಹಾಗೂ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆ ಬಳಿಕ ಬಹುತೇಕ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ಹೋಟೆಲ್ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು, ನಗರದ ಹಲವು ಕಡೆಗಳಲ್ಲಿ ಚೆಕ್ ಪೋಸ್ಟ್ ಹಾಕಲಾಗಿದ್ದು, ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ವಾರಾಂತ್ಯದ ಕರ್ಫ್ಯೂಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು.
(COVID: ಬಹಳ ತಿಂಗಳುಗಳ ನಂತರ ರಾಜ್ಯದಲ್ಲಿಂದು ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ!)