ETV Bharat / state

ದನದ ಕೊಟ್ಟಿಗೆ ಗೋಡೆ ಕುಸಿದು ಮಹಿಳೆ ಸಾವು

ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದುಬಿದ್ದು, ಮಹಿಳೆವೋರ್ವಳು ಸಾವನ್ನಪ್ಪಿದ್ದಾರೆ. ಉಡುಪಿಯ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕೊಟ್ಟಿಗೆ ಗೋಡೆ ಕುಸಿದು ಮಹಿಳೆ ಸಾವು
author img

By

Published : Aug 8, 2019, 11:33 PM IST

ಉಡುಪಿ: ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದುಬಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ನಡೆದಿದೆ.

ಕೊಟ್ಟಿಗೆ ಗೋಡೆ ಕುಸಿದು ಮಹಿಳೆ ಸಾವು

ಕೊರಗ ಮರಕಾಲ ಎಂಬುವರ ಪತ್ನಿ ಗಂಗಾಮರಕಾಲ್ತಿ (52) ಮೃತ ಮಹಿಳೆ. ನಿರಂತರ ಮಳೆಯಿಂದ ನೆಂದಿದ್ದ ಗೋಡೆ ಕುಸಿದಿದೆ. ಹಸುವಿನ ಹಾಲು ಕರೆಯುತ್ತಿದ್ದ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೇತ್ರಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು.

ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್​.ಪಿ. ನಿಶಾ ಜೇಮ್ಸ್, ಜಿಲ್ಲಾ ಪಂಚಾಯತ್ ಸಿಇಒ ಸಿಂಧೂ ರೂಪೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೌರಯ್ಯ ಹಾಗೂ ಗ್ರಾ.ಪಂ. ಅಧ್ಯಕ್ಷ ಹರೀಶ್ ಶೆಟ್ಟಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಘಟನೆ ವಿವರ ಪಡೆದ ಜಿಲ್ಲಾಧಿಕಾರಿಗಳು ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.

Intro:ಉಡುಪಿ
ಮಳೆ update ,ಸಾವು
ಫಾರ್‍ಮೆಟ್ : ಎವಿ
------------------------------------------------
ಆಂಕರ್ : ಉಡುಪಿಯಲ್ಲಿ ಸದ್ಯ ಮಳೆಯ ಅಬ್ಬರ ಕೊಂಚ ತಣ್ಣಗಾಗಿದ್ದು ,ಕಳೆದ ಮೂರು ದಿನಗಳಿಂದ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿಯುಂಟಾಗಿದೆ. ಎರಡು ದಿನ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮುಂಜಾಗರೂಕತಾ ಕ್ರಮವಾಗಿ ಇವತ್ತು ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಈ ಆದೇಶ ನೀಡಿದ್ದಾರೆ.ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ಉರುಳಿಬಿದ್ದ ಪರಿಣಾಮ ಉಂಟಾಗಿದ್ದ ವಿದ್ಯುತ್ ವ್ಯತ್ಯಯ ಸುಸ್ಥಿತಿಗೆ ಬರುತ್ತಿದೆ.ಆದರೆ ಭಾರೀ ಮಳೆಯಿಂದ ಮನೆಗಳಿಗೆ ಆದ ಹಾನಿಯನ್ನು ಸ್ಥಳೀಯ ತಹಶೀಲ್ದಾರುಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಾಪುವಿನಲ್ಲಿ ಮನೆಯ ಮೇಲೆ ಮರ ಬಿದ್ದ ಪರಿಣಾಮ ಅಪಾರ ಸೊತ್ತು ಹಾನಿ ಉಂಟಾಗಿದೆ. ರಾತ್ರಿ ಬೀಸಿದ ಗಾಳಿಗೆ ಕಾಪು ಸಮೀಪದ ಎಲ್ಲಾರು ಎಂಬಲ್ಲಿ ತಡರಾತ್ರಿ ಮರ ಉರುಳಿ ಬಿದ್ದಿದೆ. ಲಲಿತ ಎಂಬಾಕೆಗೆ ಸೇರಿದ ಮನೆ ಇದಾಗಿದ್ದು ರಾತ್ರಿ ಮಲಗಿರುವಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಪು ಜನಾರ್ಧನ ದೇವಸ್ಥಾನ ಸಮೀಪ ಇರುವ ಮನೆ ಇದಾಗಿದ್ದು ,ಸ್ಥಳಕ್ಕೆ ಕಾಪು ತಹಶೀಲ್ದಾರ್ ಭೇಟಿ ನೀಡಿದ್ದಾರೆ.ಇವತ್ತು ಬೆಳಿಗ್ಗೆ
ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ನಡೆದಿದೆ.ಇಲ್ಲಿನ ನಿವಾಸಿ ಕೊರಗ ಮರಕಾಲ ಎಂಬವರ ಪತ್ನಿ ಗಂಗಾ ಮರಕಾಲ್ತಿ(52) ಮೃತಪಟ್ಟವರು.
ನಿರಂತರ ಮಳೆಯಿಂದ ತೊಯ್ದು ಶುಷ್ಕಗೊಂಡಿದ್ದ ಕೊಟ್ಟಿಗೆಯ ಮಣ್ಣಿನ ಗೋಡೆ ಹಠಾತ್ ಕುಸಿದು ಬಿದಿದ್ದೆ. ಈ ವೇಳೆ ದನದ ಹಾಲು ಕರೆಯುತ್ತಿದ್ದ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೇತ್ರಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಘಟನಾ ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಗ್ರಾಪಂ ಅಧ್ಯಕ್ಷರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಕುಕ್ಕೆಹಳ್ಳಿ ಮಡಿ ಸೇತುವೆ ತುಂಬಿ ಹರಿಯುತ್ತಿದ್ದು ,ಈ ಭಾಗದ ಜನರು ಮತ್ತು ವಾಹನ ಸವಾರರು ಪರದಾಡುವಂತಾಗಿದೆ.ಸದ್ಯ ಮಳೆ ನಿಂತಿದ್ದರೂ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆ ಹಲವೆಡೆ ಭಾರೀ ಹಾನಿಯುಂಟು ಮಾಡಿದೆ. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಬಹುತೇಕ ತಗ್ಗು ಪ್ರದೇಶಗಳಲ್ಲಿ ಮಳೆ ನಿಂತಿದ್ದರು ಕೂಡ ನೆರೆ ಇಳಿಯದೆ ಇರುವುದು ಜನರ ಆತಂಕ ಕಾರಣವಾಗಿದೆ. ಸದ್ಯ ಜಿಲ್ಲೆಯಲ್ಲಿ ಮಳೆ ಹೊಡೆತ ಕಡಿಮೆಯಾಗಿದ್ದರು ಆಗೋಮ್ಮೆ ಈಗೋಮ್ಮೆ ಭಾರಿ ಗಾಳಿಯೊಂದಿಗೆ ಮಳೆ ಬರುತ್ತಿರುವುದು ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿಗೆ ಕಾರಣವಾಗಿದೆ. ಈಗಾಗಲೆ ಮಳೆ ಹಾನಿ ಸಂಭವಿಸಿದ ಪ್ರದೇಶಕ್ಕೆ ಧಾವಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸ್ಥಳೀಯ ತಹಶೀಲ್ದಾರರು ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.Body:ಮಳೆ ಸಾವುConclusion:ಮಳೆ ಸಾವು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.