ಉಡುಪಿ: ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸುಕೇಶ್ ಶೆಟ್ಟಿ (27) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಉಡುಪಿಯ ನಂದಳಿಕೆ ಗ್ರಾಮದ ಮಾವಿನಕಟ್ಟೆ ಆಟದ ಮೈದಾನದಲ್ಲಿ ಈ ಘಟನೆ ನಡೆದಿದೆ. ಯುವಕ ಬೌಲಿಂಗ್ ಮಾಡುವಾಗ ಕುಸಿದು ಬಿದ್ದಿದ್ದಾನೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಯುವಕ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: India vs England: ಮಳೆಯಿಂದ 2ನೇ ದಿನದಾಟ ಅಂತ್ಯ, ಭಾರತಕ್ಕೆ ರಾಹುಲ್ ಆಸರೆ