ಕುಂದಾಪುರ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕೋಟಾದಲ್ಲಿ ನಡೆದಿದೆ. ಬ್ರಹ್ಮಾವರದ ವಂಡಾರಿನ ಬೋರ್ಡಕಲ್ಲಿನ ನಿವಾಸಿ ಚೇತನ್ (24) ಮೃತಪಟ್ಟ ಯುವಕ.
ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಮನೆಯಲ್ಲೇ ಚೇತನ್ ಲ್ಯಾಪ್ಟಾಪ್ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಡಿಲು ಬಡಿದು ಗಂಭೀರವಾಗಿ ಅಸ್ವಸ್ಥನಾದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಚೇತನ್ ಮೃತಪಟ್ಟಿದ್ದ ಎನ್ನಲಾಗಿದೆ.
ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ ಚೇತನ್ ಕೊರೊನಾ ಲಾಕ್ಡೌನ್ ಹಿನ್ನೆಲೆ ಹಲವು ತಿಂಗಳಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.