ಕಾರವಾರ: ಮಹಿಳಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾಗಿರುವ ಘಟನೆ ಕುಮಟ ತಾಲೂಕಿನ ಮಿರ್ಜಾನ ಖೈರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಕುಷ್ಟಗಿಯಿಂದ ಮಂಗಳೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದ್ದು, 14 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾಕ್ಡೌನ್ ಬಿಗಿ ಬಂದೋಬಸ್ತ್ ಹಿನ್ನೆಲೆಯಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಬೆಳಗ್ಗೆ ತೆರಳುತ್ತಿದ್ದರು. ಆದರೆ ಅತಿಯಾದ ವೇಗದಿಂದಾಗಿ ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ವಾಹನ ಖೈರೆ ಬಳಿ ಪಲ್ಟಿಯಾಗಿದೆ.
ತಕ್ಷಣ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.