ETV Bharat / state

ಹಳಿಯಾಳ ಎಪಿಎಂಸಿ ಚುನಾವಣೆ... ಇಬ್ಬರು ಸದಸ್ಯರು ಕಿಡ್ನ್ಯಾಪ್​ - Karawara news

ಹಳಿಯಾಳ ಎಪಿಎಂಸಿ ಚುನಾವಣೆಗೆ ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

APMC
APMC
author img

By

Published : Jun 23, 2020, 7:33 PM IST

ಕಾರವಾರ: ಹಳಿಯಾಳ ಎಪಿಎಂಸಿ ಚುನಾವಣಾ ಕಣ ರಂಗೇರಿದ್ದು, ಚುನಾವಣೆಗೆ ಇನ್ನೇನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಕಾಣೆಯಾಗಿರುವ ಬಗ್ಗೆ ಪ್ರತ್ಯೇಕ ದೂರು ದಾಖಲಾಗಿದೆ.

ಹಳಿಯಾಳ ಎಪಿಎಂಸಿ ವ್ಯಾಪ್ತಿಗೆ ಬರುವ ರಾಮನಗರ ಭಾಗದ ಕಾಂಗ್ರೆಸ್ ಬೆಂಬಲಿತ ಎಪಿಎಂಸಿ ಸದಸ್ಯ ವಸಂತ್ ಸಗುಣ ಹರಿಜನ ಎಂಬಾತನನ್ನ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಆಕೆಯ ಪತ್ನಿ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನು ಬಿಜೆಪಿ ಬೆಂಬಲಿತ ಸದಸ್ಯ ಕೃಷ್ಣಮೂರ್ತಿ ರಾಮಚಂದ್ರ ಪಾಟೀಲ್ ರನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಆತನ ತಂದೆ ದೂರು ನೀಡಿದ್ದಾರೆ.

ಜೂನ್ 24 ರಂದು ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ‌ ಚುನಾವಣೆ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿದ್ದು, ಇದೇ ಕಾರಣದಿಂದಲೇ ಕಿಡ್ನ್ಯಾಪ್ ಪ್ರಸಂಗ ಸಹ‌ ನಡೆದಿದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.