ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ಭಯಾ ಯೋಜನೆಯಡಿ ನೀಡಿದ 28 ಹೊಸ ಬೈಕ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಎಸ್ಪಿ, ನಿರ್ಭಯಾ ಘಟನೆ ಬಳಿಕ ಕೇಂದ್ರ ಸರ್ಕಾರ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದೆ. ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಯೊಂದು ಪೊಲೀಸ್ ಇಲಾಖೆಗೆ ಬೈಕ್‌ಗಳನ್ನು ನೀಡುವ ಯೋಜನೆಯನ್ನು ರೂಪಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಗೃಹ ಇಲಾಖೆಯಿಂದ ಜಿಲ್ಲೆಗೆ ನೀಡಲಾದ 28 ಬೈಕ್‌ಗಳನ್ನು ಜಿಲ್ಲೆಯ ಪ್ರತಿಯೊಂದು ಠಾಣೆಗಳಿಗೆ ಹಂಚಿಕೆ ಮಾಡಲಾಗಿದೆ. ಮಾನವ ಕಳ್ಳಸಾಗಣೆ ತಡೆ ಘಟಕ ಹಾಗೂ ಮಹಿಳಾ ಸಹಾಯವಾಣಿ ಕೇಂದ್ರಗಳಡಿ ನೂತನ ಬೈಕ್‌ಗಳು ಬಳಕೆಯಾಗಲಿವೆ ಎಂದು ಮಾಹಿತಿ ನೀಡಿದ್ದಾರೆ. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ಜಾಥಾ ನಡೆಸಲಾಯಿತು.