ಉತ್ತರ ಕನ್ನಡ: ಡಿಸೆಂಬರ್ 05 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ, ಯಲ್ಲಾಪುರ ಮತಕ್ಷೇತ್ರದಿಂದ ಮತ್ತೆ ಮೂವರು ಅಭ್ಯರ್ಥಿಗಳು ಕಣಕ್ಕೆ ಧುಮುಕಿದ್ದಾರೆ. ಪ್ರಾದೇಶಿಕ ಪಕ್ಷದಿಂದ ಇಬ್ಬರು ಹಾಗೂ ಪಕ್ಷೇತರರಾಗಿ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿಯಿಂದ ಮುಂಡಗೋಡಿನ ಜೈತುನಬಿ ಜಿಗಳೂರು ಹಾಗೂ ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಶಿರಸಿಯ ಕಲಗಾರಿನ ಸುನೀಲ ಪವಾರ ಸ್ಪರ್ಧಿಸಿದ್ದಾರೆ. ಪಕ್ಷೇತರರಾಗಿ ಶಿರಸಿ ಹೊಸಗದ್ದೆಯ ಮಹೇಶ ಹೆಗಡೆ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲಿದ್ದಾರೆ.