ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ವಾಪಸ್ಸಾಗಿದ್ದ ಮೂವರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.
ಭಟ್ಕಳ ತಾಲೂಕಿನ ಮುರುಡೇಶ್ವರ ಮೂಲದ 45 ವರ್ಷದ ಪುರುಷ ಹಾಗೂ 18 ವರ್ಷದ ಯುವಕನಿಗೆ ಮತ್ತು ಹಳಿಯಾಳದ 31 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ 147 ಸೋಂಕಿತರು ಪತ್ತೆಯಾಗಿದ್ದು, 112 ಮಂದಿ ಗುಣಮುಖರಾಗಿದ್ದಾರೆ. ಇನ್ನು 35 ಮಂದಿ ಸೋಂಕಿತರಿಗೆ ಕಾರವಾರದ ಕ್ರೀಮ್ಸ್ ಕೊರೊನಾ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ.