ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದ್ದ ಮದುವೆ ಮನೆಯಲ್ಲಿದ್ದ32 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮದುವೆ ಮನೆಯಲ್ಲಿ ಮಾಸ್ಕ ಧರಿಸದೇ ಭಾಗವಹಿಸಿದ್ದು ಅಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿತ್ತು. ನಂತರ ಕಾಗೇರಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈಗ ಅದೇ ಮದುವೆಯಲ್ಲಿ ಭಾಗವಹಿಸಿದ್ದ 32 ಜನರಿಗೆ ಕಳೆದ ಎರಡು ದಿನಗಳಲ್ಲಿ ಸೋಂಕು ದೃಢಪಟ್ಟಿದೆ.
ಮದುವೆಯಲ್ಲಿ ಭಾಗವಹಿಸಿದ್ದ 32 ಜನರಲ್ಲಿ ಕೊರೊನಾ ಪತ್ತೆಯಾದ ಹಿನ್ನೆಲೆ ಸಮಾರಂಭದಲ್ಲಿ ಭಾಗಿಯಾಗಿದ್ದ ಇನ್ನುಳಿದವರಲ್ಲಿ ಆತಂಕ ಶುರುವಾಗಿದೆ. (ಮಾಸ್ಕ್ ಧರಿಸದೇ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದ ಸ್ಪೀಕರ್ ಕಾಗೇರಿ)