ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ಮತ್ತೆ 403 ಪ್ರಕರಣಗಳು ಪತ್ತೆಯಾಗಿ ಐವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಉತ್ತರಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಸತತ ಎರಡನೇ ದಿನವೂ 400 ರ ಗಡಿ ದಾಟಿದೆ. ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದ್ದರು ಸಹ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಇನ್ನಷ್ಟು ಆತಂಕ ಸೃಷ್ಟಿಸಿದೆ.
ಜಿಲ್ಲೆಯ ಕಾರವಾರದಲ್ಲಿ 73, ಅಂಕೋಲಾ 20, ಕುಮಟಾ 71, ಹೊನ್ನಾವರ 33, ಭಟ್ಕಳ 1, ಶಿರಸಿ 24, ಸಿದ್ದಾಪುರ 42, ಯಲ್ಲಾಪುರ 69, ಮುಂಡಗೋಡ 27, ಹಳಿಯಾಳ 34 ಹಾಗೂ ಜೊಯಿಡಾದಲ್ಲಿ 9 ಪ್ರಕರಣಗಳು ಪತ್ತೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 18,732 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 16,521 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,993 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 218 ಮಂದಿ ಸಾವನ್ನಪ್ಪಿದ್ದಾರೆ.