ETV Bharat / state

ಮಹಿಳೆಯ ಹೊಟ್ಟೆಯಲ್ಲಿತ್ತು 5 ಕೆ.ಜಿ ತೂಕದ ಗಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

ಹೊಟ್ಟೆಯಲ್ಲಿದ್ದ ಸುಮಾರು 5 ಕೆ.ಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಸಮುದಾಯ ಆರೋಗ್ಯ ಕೇಂದ್ರ ಶಿರಾಲಿಯ ವೈದ್ಯರು ಹೊರತೆಗೆದಿದ್ದು, ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಶಸ್ವಿ ಶಸ್ತ್ರಚಿಕಿತ್ಸೆ
ಯಶಸ್ವಿ ಶಸ್ತ್ರಚಿಕಿತ್ಸೆ
author img

By

Published : Feb 18, 2022, 11:13 AM IST

ಭಟ್ಕಳ: ಮಹಿಳಾ ರೋಗಿಯೊಬ್ಬರ ಹೊಟ್ಟೆಯಲ್ಲಿದ್ದ 5 ಕೆ.ಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಸಮುದಾಯ ಆರೋಗ್ಯ ಕೇಂದ್ರ ಶಿರಾಲಿಯ ವೈದ್ಯರು ಹೊರತೆಗೆದರು.

ಭಟ್ಕಳ ತಾಲೂಕಿನ ತೆರ್ನಮಕ್ಕಿ ನಿವಾಸಿಯಾದ 50 ವರ್ಷದ ಮಹಿಳೆಯೋರ್ವರಿಗೆ ಕಳೆದ 3 ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಶಿರಾಲಿಗೆ ಬಂದಿದ್ದರು. ಅವರನ್ನು ಸ್ತ್ರೀ ರೋಗ ತಜ್ಞರಾದ ಡಾ. ಬಾಲಚಂದ್ರ ಮೇಸ್ತ ಸ್ಕ್ಯಾನಿಂಗ್ ಮೂಲಕ ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ದೊಡ್ಡ ಪ್ರಮಾಣದ ಗಡ್ಡೆ ಇರುವುದು ತಿಳಿದು ಬಂದಿದೆ.

ಈ ಕುರಿತು ಮಹಿಳೆಯ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ನಂತರ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ತೂಕದ ಗಡ್ಡೆ ಹೊರತೆಗೆದಿದ್ದಾರೆ. ಚಿಕಿತ್ಸೆಯ ಬಳಿಕ ಮಹಿಳೆ ಸಮುದಾಯ ಆರೋಗ್ಯ ಕೇಂದ್ರ ಶಿರಾಲಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.