ಕಾರವಾರ: ಹತ್ತಾರು ಬಾರಿ ಸೂಚಿಸಿದ ಬಳಿಕವೂ ನೆಪ ಹೇಳಿ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಕಾರವಾರ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ 21 ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ತುರ್ತು ಕೆಲಸಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದನ್ನು ದುರುಪಯೋಗ ಪಡಿಸಿಕೊಂಡು ಮೆಡಿಕಲ್ ಶಾಪ್, ಆಸ್ಪತ್ರೆ ಹೆಸರಿನಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಸಂಚಾರಿ ಪೊಲೀಸರು ದಂಡ ವಿಧಿಸುತ್ತಿದ್ದಾರೆ.
ನಗರದ ಸುಭಾಷ್ ವೃತ್ತ, ಜಿಲ್ಲಾಧಿಕಾರಿ ಕಚೇರಿ ಹಾಗೂ ಪಿಕಳೆ ರಸ್ತೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು. ದಂಡ ವಿಧಿಸುವ ಮೂಲಕ ತಕ್ಕ ಪಾಠ ಕಲಿಸುತ್ತಿದ್ದಾರೆ.