ETV Bharat / state

ಅರೆಬೈಲ್ ಘಟ್ಟದಲ್ಲಿ ಕಂದಕಕ್ಕೆ ಉರುಳಿದ ಲಾರಿ.. ಡ್ರೈವರ್, ಕ್ಲೀನರ್ ಸ್ಥಳದಲ್ಲೇ ಸಾವು - ಈಟಿವಿ ಭಾರತ ಕನ್ನಡ

ಗ್ರಾನೈಟ್​ ತುಂಬಿಕೊಂಡು ಯಲ್ಲಾಪುರದಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಅರೆಬೈಲ್ ಘಟ್ಟದಲ್ಲಿ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

a-lorry-fell-into-a-ditch-at-arbail-ghat-two-was-died
ಅರೆಬೈಲ್ ಘಟ್ಟದಲ್ಲಿ ಕಂದಕಕ್ಕೆ ಉರುಳಿದ ಲಾರಿ.. ಡ್ರೈವರ್, ಕ್ಲೀನರ್ ಸ್ಥಳದಲ್ಲೇ ಸಾವು
author img

By

Published : Sep 17, 2022, 8:35 PM IST

ಕಾರವಾರ (ಉತ್ತರಕನ್ನಡ): ಗ್ರಾನೈಟ್ ತುಂಬಿಕೊಂಡು ಯಲ್ಲಾಪುರದಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶದ ಲಾರಿಯೊಂದು ಕಂದಕಕ್ಕೆ ಉರುಳಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಾಟ್​​ನ ತಿರುವಿನಲ್ಲಿ ನಡೆದಿದೆ.

ಅರೆಬೈಲ್ ಘಟ್ಟದಲ್ಲಿ ಕಂದಕಕ್ಕೆ ಉರುಳಿದ ಲಾರಿ.. ಡ್ರೈವರ್, ಕ್ಲೀನರ್ ಸ್ಥಳದಲ್ಲೇ ಸಾವು

ಲಾರಿ ಚಾಲಕನ ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಲಾರಿ ಸಿಮೆಂಟ್ ಡಿವೈಡರ್​​ಗೆ ಗುದ್ದಿದ ಬಳಿಕ ಮರಕ್ಕೆ ಬಡಿದು ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಸುಮಾರು 100 ಅಡಿ ಆಳದ ಕಂದಕಕ್ಕೆ ಲಾರಿ ಉರುಳಿಬಿದ್ದಿದ್ದು,ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಡ್ರೈವರ್ ಹಾಗೂ ಕ್ಲೀನರ್ ದೇಹ ಛಿದ್ರಛಿದ್ರವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಪ್ರೇಯಸಿ ಎದುರು ಹೊಡೆದರು ಅಂತಾ ಆತ್ಮಹತ್ಯೆ ಮಾಡಿಕೊಂಡ ಯುವಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.