ETV Bharat / state

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ - undefined

ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಯಲ್ಲಾಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

sirsi
author img

By

Published : May 20, 2019, 11:08 AM IST

ಶಿರಸಿ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದ ನಾಯಕನ ಕೆರೆಯಲ್ಲಿ ನಡೆದಿದೆ.

ಮಂಜುನಾಥ ಗಣಪತಿ ಶೆಟ್ಟಿ (45) ಮೃತ ವ್ಯಕ್ತಿ. ಇವರು ಯಲ್ಲಾಪುರ ಪಟ್ಟಣದ ಹುಲ್ಲೋರ ಮನೆಯ ನಿವಾಸಿಯಾಗಿದ್ದು, ಇವರು ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು. ಇಂದು ನಾಯಕನ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ನಾಯಕನ ಕೆರೆಯಲ್ಲಿ ಪತ್ತೆಯಾಗಿರುವ ವ್ಯಕ್ತಿಯ ಶವ

ಶವ ಪತ್ತೆಯಾದ ತಕ್ಷಣವೇ ಅಗ್ನಿಶಾಮದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.