ಕಾರವಾರ: ವಿಡಿಯೋ ಕಾಲ್ನಲ್ಲಿ ಪತ್ನಿಯೊಂದಿಗೆ ಮಾತನಾಡುತ್ತಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಾರವಾರ-ಚಿತ್ತಾಕುಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ತಾಕುಲದ ನಾಕುದಾಮೊಹಲ್ಲಾ ನಿವಾಸಿ ಮಹ್ಮದ್ ಶಫೀಕ್ ಖಾನ್(34) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ನಿರುದ್ಯೋಗಿಯಾಗಿದ್ದ ಮಹ್ಮದ್, ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಗೋವಾದ ವಾಸ್ಕೋದಲ್ಲಿರುವ ತನ್ನ ಪತ್ನಿಗೆ ವಾಟ್ಸಾಪ್ನಲ್ಲಿ ವಿಡಿಯೋ ಕರೆ ಮಾಡಿ ತನಗೆ ಜೀವನ ಸಾಕಾಗಿದೆ. ತಾನು ಸಾಯುತ್ತೇನೆ ಎಂದು ಹೇಳಿಕೊಂಡಿದ್ದರಂತೆ.
ಇದನ್ನೂ ಓದಿ: 'ಮಹೀಂದ್ರಾ ಕುಟುಂಬಕ್ಕೆ ನಿಮಗೆ ಸ್ವಾಗತ'.. ತುಮಕೂರಿನ ಕೆಂಪೇಗೌಡರಿಗೆ ಧನ್ಯವಾದ ಅರ್ಪಿಸಿದ ಆನಂದ್ ಮಹೀಂದ್ರಾ!
ಬಳಿಕ ಮನೆಯ ಹಾಲ್ನಲ್ಲಿ ನೇಣು ಬಿಗಿದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಹೇಳುತ್ತಿರುವಾಗಲೇ ಆಕೆಯ ಕರೆಯನ್ನು ಕಟ್ ಮಾಡಿ ಮೊಬೈಲ್ ಬಂದ್ ಮಾಡಿ ನೇಣಿಗೆ ಶರಣಾಗಿದ್ದಾರೆ. ಕೂಡಲೇ ಪತ್ನಿ ಆತನ ಅಕ್ಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಅಲ್ಲಿಗೆ ಅವರು ಹೋಗುವಷ್ಟರಲ್ಲಿ ವ್ಯಕ್ತಿ ಸಾವನ್ನಪ್ಪಿದ್ದರು ಎನ್ನಲಾಗುತ್ತಿದೆ.
ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕಲಂ 174 ಸಿಆರ್ಪಿಸಿ ಅಡಿ ಪ್ರಕರಣ ದಾಖಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ