ಭಟ್ಕಳ: ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ ವೇಳೆ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿರಾಲಿ ನಿಲಕಂಠದ ಹುಲ್ಲುಕ್ಕಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಜುಬೇರ್ ಇರ್ಶಾದ್ ಅಲಿಅಕ್ಬರ್ ಕಾರಗದ್ದೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಸ್ನೇಹಿತರೊಂದಿಗೆ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ ವೇಳೆ ಈ ದುರ್ಘಟನೆ ನಡೆದಿದೆ. ಅನೇಕ ವರ್ಷದಿಂದ ಶಿಲೆ ಕಲ್ಲು ಕ್ವಾರಿ ನಡೆಸಿ ಸದ್ಯ ಖಾಲಿ ಇರುವ ಈ ಸ್ಥಳದಲ್ಲಿ ಮಳೆ ನೀರು ತುಂಬಿ ಹೊಳೆಯಂತಾಗಿದೆ. ಶುಕ್ರವಾರದ ರಜೆಯ ದಿನವನ್ನು ಕಳೆಯಲು ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬಳಿಕ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ ಹಾಗೂ ಸ್ಥಳಿಯರು ಯುವಕನ ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಇನ್ನು ಘಟನೆ ಸ್ಥಳದಲ್ಲಿ ತಹಶೀಲ್ದಾರ್ ಡಾ.ಸುಮಂತ.ಬಿ, ಸಿ.ಪಿ.ಐ ಮಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಭರತ್ ನಾಯಕ, ಹಾಗೂ ಮಾವಳ್ಳಿ ಕಂದಾಯ ನಿರೀಕ್ಷಕರಾದ ಶ್ರೀನಿವಾಸ ಮಾಸ್ತಿ, ಗ್ರಾಮ ಲೆಕ್ಕಾಧಿಕ ಹೇಮಾ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಚಾಮರಾಜನಗರ: ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವಪತ್ತೆ