ETV Bharat / state

ಕೊರೊನಾ ಸತ್ಯ ಮುಚ್ಚಿಟ್ಟು ದುರಂತ ಅಂತ್ಯ ಕಂಡ ಮದುಮಗ... ಕುಟುಂಬಸ್ಥರ ವಿರುದ್ಧ ಪ್ರಕರಣ!

ಕೊರೊನಾ ಲಕ್ಷಣ ಇದ್ದರೂ ಅದನ್ನು ಮುಚ್ಚಿಟ್ಟು ಮದುವೆಯಾದ 26 ವರ್ಷದ ಯುವಕನೋರ್ವ ಐದೇ ದಿನದಲ್ಲಿ ಸಾವನ್ನಪ್ಪಿದ್ದಾನೆ. ಇದೀಗ ಆತನ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ.

corona symptoms and he died
ಕೊರೊನಾ
author img

By

Published : Jul 1, 2020, 6:12 PM IST

ಕಾರವಾರ: ಕೊರೊನಾ ಲಕ್ಷಣ ಇದ್ದರೂ ಅದನ್ನು ಮುಚ್ಚಿಟ್ಟು ಮದುವೆಯಾದ 26 ವರ್ಷದ ಯುವಕನೋರ್ವ ಐದೇ ದಿನಗಳಲ್ಲಿ ಮೃತಪಟ್ಟಿದ್ದಾರೆ. ಇದೀಗ ಆತನ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ.

ಮಂಗಳೂರಿನಲ್ಲಿ ನೆಲೆಸಿರುವ ಕುಟುಂಬದ ಯುವಕನೋರ್ವ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ. ಈತನಿಗೆ ಭಟ್ಕಳದ ಯುವತಿಯೊಂದಿಗೆ ಜೂ.25 ರಂದು ಮದುವೆ ನಿಶ್ಚಯವಾಗಿತ್ತು. ಅದರಂತೆ ಭಟ್ಕಳಕ್ಕೆ ಬಂದು ಮದುವೆಯಾಗಿ ಬಳಿಕ ಮಂಗಳೂರಿಗೆ ತೆರಳಿದ್ದ. ಮದುವೆಗೂ ಮುಂಚೆಯೇ ಈತನಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದಿತ್ತಾದರೂ, ಆತನಾಗಲಿ ಆತನ ಕುಟುಂಬದವರಾಗಲಿ ಸತ್ಯ ಹೇಳದೆ ಚಿಕಿತ್ಸೆಯನ್ನು ಪಡೆಯದೇ ನಿರ್ಲಕ್ಷ್ಯ ವಹಿಸಿದ್ದರು. ಮಂಗಳೂರಿಗೆ ತೆರಳಿದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮೂರು ದಿನದಲ್ಲಿ ವರದಿ ಬರುವ ಹೊತ್ತಿಗೆ ಯುವಕ ಸಾವನ್ನಪ್ಪಿದ್ದಾನೆ.

ಮೃತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಜಿಲ್ಲಾಡಳಿತ

ಇದೀಗ ಆತನ ಕುಟುಂಬ ಸೇರಿದಂತೆ ಮದುವೆಗೆ ಆಗಮಿಸಿದವರಲ್ಲಿ ಕೊರೊನಾ ಸೋಂಕುಗಳು ಕಾಣಿಸಿಕೊಳ್ಳತೊಡಗಿವೆ. ಈಗಾಗಲೇ ಮದುವೆ ಸಮಾರಂಭದಲ್ಲಿ ತೀರಾ ಹತ್ತಿರದ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಿದ್ದು, ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶ್​ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸತ್ಯ ಮುಚ್ಚಿಟ್ಟು ನಿರ್ಲಕ್ಷ್ಯ ವಹಿಸಿದ ಕಾರಣ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸುತ್ತಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.