ಕಾರವಾರ: ಮದುವೆಗೆ ತೆರಳುತ್ತಿದ್ದ ಓಮಿನಿ ಕಾರು ಲಾರಿಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ನಡೆದಿದೆ. ಸಹನಾ ಶಾನುಭಾಗ (52) ಮೃತರೆಂದು ಗುರುತುಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಯಲ್ಲಾಪುರ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಅಂಕೋಲಾಗೆ ತೆರಳುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಮಾದನಗೇರಿಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಅಪಘಾತ; ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ ಯುವತಿಯರು ಸಾವು