ಶಿರಸಿ(ಉತ್ತರ ಕನ್ನಡ): ಚಲಿಸುತ್ತಿದ್ದ ಓಮಿನಿ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ನೀರ್ನಳ್ಳಿ ಕ್ರಾಸ್ ಬಳಿ ನಡೆದಿದೆ.
ಶಿರಸಿ ತಾಲೂಕಿನ ಶಿಂಗನಮನೆಯ ವಿನಾಯಕ ಹೆಗಡೆ ಎಂಬುವವರಿಗೆ ಸೇರಿದ ಓಮಿನಿ ಇದಾಗಿದ್ದು, ಮನೆಯಿಂದ ಶಿರಸಿ ಕಡೆಗೆ ಬರುತಿದ್ದ ವೇಳೆ ತಾಂತ್ರಿಕ ದೋಷದಿಂದಾಗಿ ಓಮಿನಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಬೆಂಕಿ ತಗುಲುತ್ತಿದ್ದಂತೆ ಎಚ್ಚತ್ತುಕೊಂಡ ಓಮಿನಿಯಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡಲೇ ಕಾರು ನಿಲ್ಲಸಿ ಹೊರಗಡೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.