ETV Bharat / state

ಅಕ್ರಮ ಸಾಗಾಟಗಾರರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ: 200 ಮೆಟ್ರಿಕ್ ಟನ್ ಮರಳು ವಶ

author img

By ETV Bharat Karnataka Team

Published : Oct 27, 2023, 10:59 PM IST

Updated : Oct 28, 2023, 12:45 PM IST

ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ನೇತೃತ್ವದ ತಂಡವು ಅಕ್ರಮ ಮರಳು ಸಾಗಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ.

ಅಕ್ರಮ ಸಾಗಾಟಗಾರರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ: 200 ಮೆಟ್ರಿಕ್ ಟನ್ ಮರಳು ವಶ
ಅಕ್ರಮ ಸಾಗಾಟಗಾರರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ: 200 ಮೆಟ್ರಿಕ್ ಟನ್ ಮರಳು ವಶ
ಅಕ್ರಮ ಸಾಗಾಟಗಾರರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಾಸ್ತಾನು ಮತ್ತು ಅಕ್ರಮ ಮರಳು ಸಾಗಾಟ ನಡೆಸುವವರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ನೇತೃತ್ವದ ಅಧಿಕಾರಿಗಳ ತಂಡ ಇಂದು (ಶುಕ್ರವಾರ) ಜಿಲ್ಲೆಯಾದ್ಯಂತ ಅನಿರೀಕ್ಷಿತ ದಾಳಿ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದೆ.

ಬೆಳಿಗ್ಗೆ 4 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗೆ ಯಾವುದೇ ಮುನ್ಸೂಚನೆ ನೀಡದೇ, ಅಕ್ರಮದ ಕುರಿತು ತಮಗೆ ದೊರೆತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಸಂಗ್ರಹ, ಮರಳು ತುಂಬಿದ್ದ ವಾಹನಗಳನ್ನು ಕಂಡ ಜಿಲ್ಲಾಧಿಕಾರಿಗಳು, ಕೂಡಲೇ ಸಂಬಂಧಿಪಟ್ಟ ತಾಲೂಕಿನ ತಹಸೀಲ್ದಾರ್​ಗೆ ಅವುಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಅಕ್ರಮದಲ್ಲಿ ತೊಡಗಿರುವವನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

ಅಂಕೋಲಾ ಮತ್ತು ಕುಮುಟಾ, ಶಿರೂರು, ಕೊಡ್ಕಣಿ, ಮಿರ್ಜಾನ, ದಿವಗಿ, ತಾರೆಬಾಗಿಲು, ಹೆಗಡೆ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿ ದಾಳಿ ನಡೆಸಿ, ಅಕ್ರಮ ಮರಳುಗಾರಿಕೆ ವಿರುದ್ದ ಕಾನೂನು ಕ್ರಮ ಕೈಗೊಂಡರು. ಜಿಲ್ಲಾಧಿಕಾರಿಗಳೊಂದಿಗೆ ಕುಮುಟಾ ಉಪ ವಿಭಾಗಾಧಿಕಾರಿ ಕಲ್ಯಾಣಿ, ತಹಸೀಲ್ದಾರ್ ಸತೀಶ್ ಗೌಡ, ಅಂಕೊಲ ತಹಸೀಲ್ದಾರ್ ಅಶೋಕ್ ಭಟ್ ಮತ್ತು ಕಂದಾಯ ಇಲಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ನೇತೃತ್ವದ ಮತ್ತೊಂದು ಅಧಿಕಾರಿಗಳ ತಂಡ ಕೂಡ ಜಿಲ್ಲೆಯ ಇತರೆ ಭಾಗದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಮತ್ತು ಸಾಗಾಟಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಂಡರು. ಇಂದು ನಡೆದ ದಾಳಿಯಲ್ಲಿ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ 60ಕ್ಕೂ ಹೆಚ್ಚು ಕಂದಾಯ ಇಲಾಖೆಯ ಸಿಬ್ಬಂದಿ ತಂಡವು, 16 ವಾಹನಗಳಲ್ಲಿ 4 ತಂಡಗಳಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದ್ದು, ಸುಮಾರು 200 ಮೆಟ್ರಿಕ್ ಟನ್ ಮರಳು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 2.5 ಲಕ್ಷ ರೂ. ಆಗಿದೆ.

''ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಚಟುವಟಿಕೆಗಳ ಬಗ್ಗೆ ನಿರಂತವಾಗಿ ದೂರುಗಳು ಬರುತ್ತಿದ್ದು, ಇಂದು ಖುದ್ದು ತಾನೇ ಅಕ್ರಮ ನಡೆಯುವ ಸ್ಥಳಗಳಿಗೆ ಅನಿರೀಕ್ಷಿತ ದಾಳಿ ನಡೆಸಿ, ಮರಳು ವಶಕ್ಕೆ ತೆಗೆದುಕೊಂಡಿದ್ದೇವೆ. ಜಿಲ್ಲೆಯಲ್ಲಿ ಇನ್ನು ಮುಂದೆ ಅಕ್ರಮ ಮರಳುಗಾರಿಕೆ ನಡೆಯುವ ಸ್ಥಳಗಳಿಗೆ ಈ ರೀತಿಯ ದಾಳಿಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಇದನ್ನೂ ಓದಿ: ವರ್ತೂರು ಸಂತೋಷ್ ಬಿಡುಗಡೆ: ಆತ್ಮೀಯವಾಗಿ ಬರಮಾಡಿಕೊಂಡ ಕುಟುಂಬಸ್ಥರು, ಬೆಂಬಲಿಗರು

Last Updated : Oct 28, 2023, 12:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.