ETV Bharat / state

ಅಲ್ ಖೈದಾ ಮುಖ್ಯಸ್ಥನಿಂದ ಮುಸ್ಲಿಂ ವಿದ್ಯಾರ್ಥಿನಿಗೆ ಶ್ಲಾಘನೆ : ತನಿಖೆಗೆ ಆಗ್ರಹಿಸಿ ಸಿಎಂಗೆ ಪತ್ರ ಬರೆದ ಸಂಸದ! - Al-Qaeda chief applauds Muslim student]

ಅಲ್ ಖೈದಾ ಮುಖ್ಯಸ್ಥ ಅಲ್ ಜವಾಹಿರಿ ಮುಸ್ಲಿಂ ವಿದ್ಯಾರ್ಥಿನಿಗೆ ಶಹಬ್ಬಾಸ್ ಗಿರಿ ನೀಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಸಂಸದ ಅನಂತ್ ಕುಮಾರ್ ಹಗಡೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ..

al-qaeda-chief-applauds-muslim-student-mp-writes-letter-to-cm-demanding-probe
ಅಲ್ ಖೈದಾ ಮುಖ್ಯಸ್ಥನಿಂದ ಮುಸ್ಲಿಂ ವಿದ್ಯಾರ್ಥಿನಿಗೆ ಶ್ಲಾಘನೆ : ತನಿಖೆಗೆ ಆಗ್ರಹಿಸಿ ಸಿಎಂ ಗೆ ಪತ್ರ ಬರೆದ ಸಂಸದ!
author img

By

Published : Apr 11, 2022, 12:11 PM IST

ಕಾರವಾರ : ಇತ್ತೀಚಿಗೆ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಜವಾಹಿರಿ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಮಂಡ್ಯ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರಶಂಸಿಸಿದ್ದ. ಕರ್ನಾಟಕದಲ್ಲಿ ಹಿಜಾಬ್ ವಿವಾದ ಮುಗಿಯಿತು ಎಂದುಕೊಳ್ಳುವಷ್ಟರಲ್ಲಿ ಈತನ ಹೇಳಿಕೆಯಿಂದ ಈಗ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಉತ್ತರಕನ್ನಡ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿಗೆ ಪತ್ರವೊಂದನ್ನು ಬರೆದಿದ್ದಾರೆ.

al-qaeda-chief-applauds-muslim-student-mp-writes-letter-to-cm-demanding-probe
ತನಿಖೆಗೆ ಆಗ್ರಹಿಸಿ ಸಿಎಂ ಗೆ ಪತ್ರ ಬರೆದ ಸಂಸದ ಅನಂತ್ ಕುಮಾರ್ ಹೆಗಡೆ

ಎರಡು ತಿಂಗಳ ಹಿಂದೆ ಮಂಡ್ಯದ ಕಾಲೇಜೊಂದರಲ್ಲಿ ಹಿಜಾಬ್ ವಿರುದ್ಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ 'ಜೈ ಶ್ರೀರಾಮ್ ಘೋಷಣೆ ಪ್ರತಿಯಾಗಿ, ಮುಸ್ಲಿಂ ಯುವತಿಯು 'ಅಲ್ಲಾ ಹು ಅಕ್ಬರ್' ಎಂದು ಕೂಗುತ್ತಾ ತರಗತಿಗೆ ತೆರಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಬಳಿಕ ಮುಸ್ಲಿಂ ಯುವತಿಯನ್ನು ಹಲವು ಮುಸ್ಲಿಂ ಮುಖಂಡರು ಭೇಟಿಯಾಗಿ, ಬಹುಮಾನವನ್ನು ಘೋಷಿಸಿದ್ದರು. ಈ ಘಟನೆ ನಡೆದು ಎರಡು ತಿಂಗಳ ಬಳಿಕ ಇದೀಗ ಅಲ್ ಖೈದಾ ಮುಖ್ಯಸ್ಥ ಅಲ್ ಜವಾಹಿರಿ ಈ ಯುವತಿಗೆ ಶಹಬ್ಬಾಸ್ ಗಿರಿ ನೀಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಇದು ಸದ್ಯ ಇನ್ನೊಂದು ವಿವಾದಕ್ಕೆ ಎಡೆ ಮಾಡಿದೆ‌.

ಈ ಬಗ್ಗೆ ತನಿಖೆ ನಡೆಸಬೇಕೆಂದು ಉತ್ತರಕನ್ನಡ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.'ಈ ಹಿಂದೆ ಹಿಜಾಬ್ ವಿವಾದ ತಾರಕ್ಕೇರಿದ್ದ ಸಂದರ್ಭದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ ಇದಕ್ಕುತ್ತರವಾಗಿ ಬೀಬಿ ಮುಸ್ಕಾನ್ ಎಂಬ ಬುರ್ಖಾಧಾರಿ ವಿದ್ಯಾರ್ಥಿನಿಯು 'ಅಲ್ಲಾ ಹೂ ಅಕ್ಬರ್' ಎಂದು ಕೂಗಿದ್ದ ವಿಡಿಯೋ ಜಗತ್ತಿನೆಲ್ಲಡೆ ಪ್ರಮುಖ ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರವಾಗಿ, ಸದರಿ ವಿದ್ಯಾರ್ಥಿನಿಯು ದಿಢೀರ್ ಪ್ರಸಿದ್ಧಿಯನ್ನು ಪಡೆದಿದ್ದ ಘಟನೆ ನಡೆದಿತ್ತು.

ಈ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಸಂಘಟನೆಗಳಿಂದ ಪ್ರಶಂಸೆಯ ನುಡಿಗಳು ಹಾಗೂ ಬಹುಮಾನಗಳ ಘೋಷಣೆ ಮಾಡಲಾಗಿತ್ತು. ಹೀಗಿರುವಾಗ ನಿಷೇಧಿತ ಮುಸ್ಲಿಂ ಭಯೋತ್ಪಾದಕ ಸಂಘಟನೆಯಾದ ಆಲ್-ಖೈದಾದ ಮುಖ್ಯಸ್ಥನಾದ ಆಯಮನ್-ಅಲ್-ಜವಾಹರಿ ಇತ್ತೀಚೆಗೆ ಈ ವಿದ್ಯಾರ್ಥಿನಿಯ ಕುರಿತು 'ಭಾರತದ ಸರ್ವಶ್ರೇಷ್ಟ ಮಹಿಳೆ' ಎಂದು ಹೊಗಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿದೆ'.

ಕರ್ನಾಟಕ ರಾಜ್ಯ ಉನ್ನತ ನ್ಯಾಯಾಲಯವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರೂ ಸಹಿತ ಹಲವಾರು ರಾಜಕಾರಣಿಗಳು, ಮೂಲಭೂತವಾದಿ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಉನ್ನತ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿರುತ್ತಾರೆ.

ಹಿಜಾಬ್ ಪ್ರತಿಭಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಉನ್ನತ ನ್ಯಾಯಲಯ ಪೀಠವು ಅಭಿಪ್ರಾಯ ವ್ಯಕ್ತಪಡಿಸಿರುವುದು ಇಲ್ಲಿ ಉಲ್ಲೇಖನೀಯವಾಗಿದೆ. ಕಾರಣ ಬೀಬಿ ಮುಸ್ಕಾನ್ ವಿದ್ಯಾರ್ಥಿನಿಗೆ ಹಿಜಾಬ್ ಷಡ್ಯಂತ್ರದ ಹಿಂದಿರುವ ಕಾಣದ ಕೈಗಳು ಮತ್ತು ನಿಷೇಧಿತ ಸಂಘಟನೆಗಳೊಂದಿಗೆ ಇರುವ ಸಂಬಂಧದ ಕುರಿತಂತೆ ಕೂಲಂಕಷವಾದ ತನಿಖೆ ನಡೆಸಬೇಕು' ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಒತ್ತಾಯಿಸಿದ್ದಾರೆ.

ಓದಿ : ಶ್ರೀರಾಮ ನವಮಿ ರ‍್ಯಾಲಿ: ಸ್ಕೂಟಿ ಓಡಿಸಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡ ಶಾಸಕಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.