ETV Bharat / state

ಕಾರವಾರ: ತಿಮಿಂಗಿಲದ ವಾಂತಿಯ ತುಣುಕು ಪತ್ತೆ... ಇದರ ಬೆಲೆ ಕೇಳಿದ್ರೆ ಶಾಕ್​ ಆಗ್ತೀರಾ! - Whale vomiting

ಮುರುಡೇಶ್ವರದ ಜನಾರ್ಧನ್ ಹರಿಕಾಂತ್ ಎಂಬುವವರು ಮೀನುಗಾರಿಕೆಗೆ ತೆರಳಿದ ವೇಳೆ ಬಿಳಿಯಾಗಿದ್ದ ಕಲ್ಲೊಂದು ಗೋಚರವಾಗಿತ್ತು. ನಂತರ ಅದನ್ನು ಕೆಲವರಿಗೆ ತೋರಿಸಿದಾಗ ತಿಮಿಂಗಿಲದ ವಾಂತಿ (ಅಂಬೆರ್ಗ್ರಿಸ್) ಎಂದು ತಿಳಿದು ಬಂದಿದೆ. ಅಲ್ಲದೇ ಇದು ಕೋಟ್ಯಂತರ ರೂಪಾಯಿ ಬೆಲೆ ಬಾಳುವಂತದ್ದು ಎನ್ನಲಾಗಿದೆ.

Ambergris
ತಿಮಿಂಗಲದ ವಾಂತಿ
author img

By

Published : Apr 25, 2021, 12:25 PM IST

Updated : Apr 25, 2021, 12:35 PM IST

ಕಾರವಾರ: ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸುಮಾರು ಒಂದು ಕೆಜಿ ತೂಕದ ತಿಮಿಂಗಿಲದ ವಾಂತಿಯ (ಅಂಬೆರ್ಗ್ರಿಸ್) ತುಣುಕೊಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಮೀನುಗಾರನಿಗೆ ದೊರೆತಿದೆ.

ಮುರುಡೇಶ್ವರದ ಜನಾರ್ಧನ್ ಹರಿಕಾಂತ್ ಎಂಬುವವರು ಮೀನುಗಾರಿಕೆಗೆ ತೆರಳಿದ ವೇಳೆ ಬಿಳಿಯಾಗಿದ್ದ ಕಲ್ಲೊಂದು ಗೋಚರವಾಗಿತ್ತು. ಸ್ವಲ್ಪ ವಿಚಿತ್ರವಾಗಿ ಕಂಡ ಅದನ್ನು ಮನೆಗೆ ತಂದಿದ್ದ ಅವರು ಕೆಲವರಿಗೆ ತೋರಿಸಿದಾಗ ತಿಮಿಂಗಿಲದ ವಾಂತಿ ಎಂಬುದಾಗಿ ತಿಳಿಸಿದ್ದರು. ಅಲ್ಲದೇ ಇದು ಕೋಟ್ಯಂತರ ರೂ. ಬೆಲೆ ಬಾಳುವುದಾಗಿಯೂ ತಿಳಿಸಿದ್ದರು. ಆದರೆ ಈ ಬಗ್ಗೆ ಇನ್ನಷ್ಟು ವಿಚಾರಿಸಿದಾಗ ಇದನ್ನು ನಮ್ಮ ದೇಶದಲ್ಲಿ ಮಾರಲು ಅನುಮತಿ ಇಲ್ಲ ಎಂಬುದನ್ನು ತಿಳಿದಾಗ ಅವರು ಹೊನ್ನಾವರ ವಿಭಾಗದ ಅರಣ್ಯಾಧಿಕಾರಿ ರಂಗನಾಥ್ ​ಅವರಿಗೆ ಹಸ್ತಾಂತರಿಸಿದ್ದಾರೆ.

ತಿಮಿಂಗಿಲದ ವಾಂತಿಯ ತುಣುಕು ಪತ್ತೆ

ಅಂಬೆರ್ಗ್ರಿಸ್:

ಅಂಬೆರ್ಗ್ರಿಸ್ ಎಂದು ಇಂಗ್ಲಿಷ್​​ನಲ್ಲಿ ಹೇಳುವ ಹಾಗೂ ಕನ್ನಡದಲ್ಲಿ ತಿಮಿಂಗಿಲದ ವಾಂತಿ ಎಂದರೆ ತಿಮಿಂಗಿಲ ಸೇವಿಸಿದ ಆಹಾರ ಜೀರ್ಣವಾಗದೆ ಹೊರಕ್ಕೆ ಹಾಕಿದಾಗ ದ್ರವ ಮಿಶ್ರಿತ ಘನ ವಸ್ತುವಿಗೆ ಅಂಬೆರ್ಗ್ರಿಸ್ ಅಥವಾ ತಿಮಿಂಗಿಲದ ವಾಂತಿ ಎಂದು ಹೇಳುತ್ತಾರೆ.

ಡಾ. ಶಿವಕುಮಾರ ಹರಗಿ ಏನಂತಾರೆ?

ಈ ಕುರಿತು ಕಾರವಾರದ ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ ಹರಗಿ ಹೇಳುವಂತೆ ಎಲ್ಲಾ ತಿಮಿಂಗಿಲಗಳ ವಾಂತಿ ಹೆಚ್ಚು ಬೆಲೆ ಬಾಳದು. ಸ್ಪೆರ್ಮ್ ವೇಲ್ ಪ್ರಭೇದದ ತಿಮಿಂಗಿಲಗಳಿಂದ ಮಾತ್ರ ಅಂಬೆರ್ಗ್ರಿಸ್ ಹೊರ ಬರುತ್ತದೆ. ಪಶ್ಚಿಮ ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲೇ ಇದ್ದು, ಪಶ್ಚಿಮ ಭಾಗದಿಂದಲೇ ವಲಸೆ ಹೋಗುತ್ತವೆ. ಅವು ಮಣಕಿ (ಸ್ಕ್ವಿಡ್), ಕಪ್ಪೆ ಬೊಂಡಾಸ್ (ಕಟಲ್ ಫಿಶ್) ಮೀನುಗಳನ್ನು ಬೇಟೆಯಾಡಿ ತಿನ್ನುತ್ತವೆ. ಕೆಲವೊಮ್ಮೆ ಈ ಮೀನುಗಳ ಗಟ್ಟಿಯಾದ ಎಲುಬುಗಳು ತಿಮಿಂಗಿಲದಲ್ಲಿ ಸಂಪೂರ್ಣವಾಗಿ ಜೀರ್ಣವಾಗುವುದಿಲ್ಲ. ಅದು ಜೀರ್ಣಾಂಗದಲ್ಲೇ ತಿಂಗಳು, ವರ್ಷಗಟ್ಟಲೇ ಉಳಿಯುತ್ತದೆ. ಇದರಿಂದ ತಿಮಿಂಗಿಲ ಕಿರಿಕಿರಿ ಅನುಭವಿಸುತ್ತದೆ. ಕೊನೆಗೆ ವಾಂತಿ ಮಾಡಿ ಹೊರಹಾಕುತ್ತದೆ. ಕೆಲವೊಮ್ಮೆ ಮಲದಲ್ಲೂ ಸೇರಿರುತ್ತದೆ.

ಮೀನಿನ ಮೂಳೆಗಳು ತಿಮಿಂಗಿಲದ ಹೊಟ್ಟೆಯಲ್ಲಿ ತಿಂಗಳುಗಟ್ಟಲೇ ಸಂಗ್ರಹವಾಗಿದ್ದಾಗ ಹಲವು ರಾಸಾಯನಿಕ ಪ್ರಕ್ರಿಯೆಗಳಿಗೆ ಒಳಗಾಗುತ್ತದೆ. ಅದು ಮೇಣದಂತೆ ರಚನೆಯಾಗಿ ಪರಿವರ್ತನೆಯಾಗುತ್ತದೆ. ಈ ಹಂತದಲ್ಲಿ ಆ ವಸ್ತು ಸುಗಂಧ ಪಡೆದುಕೊಂಡಿರುತ್ತದೆ. ತಿಮಿಂಗಿಲ ಹೊರಹಾಕಿದ ವಾಂತಿಯು ಮೊದಲು ಭಾರವಾಗಿದ್ದು, ನಂತರ ಸಮುದ್ರದಲ್ಲಿ ರಾಸಾಯನಿಕ ಪ್ರಕ್ರಿಯೆಯಲ್ಲಿ ಗಟ್ಟಿಯಾಗಿ ನಿಧಾನಗತಿಯಲ್ಲಿ ನೀರಿನಲ್ಲಿ ತೇಲುತ್ತದೆ. ಕೆಲವೊಮ್ಮೆ ಪ್ರಖರ ಬಿಸಿಲಿಗೆ ಕರಗುವ ಸಾಧ್ಯತೆಯಿರುತ್ತದೆ. ಒಂದು ವೇಳೆ ತಿಮಿಂಗಿಲವು ಮೀನುಗಳನ್ನು ತಿಂದ ಒಂದೆರಡು ವಾರಗಳಲ್ಲೇ ಎಲುಬುಗಳನ್ನು ಹೊರ ಹಾಕಿದರೆ ಅದು ಅಸಹನೀಯ ವಾಸನೆಯಿಂದ ಕೂಡಿರುತ್ತದೆ ಎಂದು ತಿಳಿಸಿದರು.

ತಿಮಿಂಗಿಲಗಳ ವಾಂತಿ:

ಬಲು ಅಪರೂಪಕ್ಕೆ ಒಂದು ಬಾರಿ ಮಾತ್ರ ತಿಮಿಂಗಿಲಗಳು ವಾಂತಿ ಮಾಡಿಕೊಳ್ಳುತ್ತವೆ. ಒಂದು ತಿಮಿಂಗಿಲ ಒಂದು ಕೆಜಿಯಿಂದ ಹತ್ತು ಕೆಜಿಗೂ ಹೆಚ್ಚು ವಾಂತಿ ಮಾಡಿಕೊಳ್ಳುತ್ತದೆ. ಜೀರ್ಣಾಂಗದಲ್ಲಿ ಇವು ರಾಸಾಯನಿಕಕ್ಕೆ ಒಳಗಾಗುವುದರಿಂದ ಇದರ ವಾಂತಿ ಸುಗಂಧಭರಿತವಾಗಿರುತ್ತದೆ. ಮೊದಲು ಇದನ್ನು ಸುಟ್ಟಾಗ ವ್ಯಾಕ್ಸ್​​ನಂತೆ ಕರಗಿ ಕೆಟ್ಟ ವಾಸನೆ ಬರುತ್ತದೆ. ನಂತರ ಸುಂಗಂಧಭರಿತವಾಗಿರುತ್ತದೆ.

ಇದನ್ನೂ ಓದಿ: 11 ಮೀನುಗಾರರು ನಾಪತ್ತೆ: ಅರಬ್ಬಿ ಸಮುದ್ರದಲ್ಲಿ ಬೋಟ್ ಅವಶೇಷ ಪತ್ತೆ

ಇದಕ್ಕೆ ಸುಗಂಧ ದ್ರವ್ಯ ಉತ್ಪಾದನೆಯಲ್ಲಿ ಹೆಚ್ಚು ಬೇಡಿಕೆ ಇದೆ. ಹೀಗಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ ಇದಕ್ಕೆ ಒಂದು ಕೆಜಿಗೆ ಕೋಟಿಗಟ್ಟಲೆ ಮೌಲ್ಯವಿದೆ. ಹೀಗಾಗಿ ವೇಲ್​ಗಳ ಮಾರಣಹೋಮವು ಸಹ ನಡೆಯುತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ WWF ಹಾಗೂ ನಮ್ಮ ದೇಶದ ಅರಣ್ಯ ಕಾಯ್ದೆ ಪ್ರಕಾರ ಇವುಗಳನ್ನು ಸಂಗ್ರಹಿಸುವುದು, ಮಾರುವುದು ಕಾನೂನು ಬಾಹಿರವಾಗಿದೆ. ಇನ್ನು ಹಲವು ದೇಶದಲ್ಲಿ ಇವುಗಳ ಮಾರಾಟ, ಆಮದಿಗೆ ಸಹ ಅನುಮತಿ ಇದೆ. ಹೀಗಾಗಿ ಇದರ ಮೌಲ್ಯ ಜಾಸ್ತಿಯಿದ್ದು, ಕಳ್ಳಹಾದಿಯಲ್ಲಿ ಸಹ ಮಾರಾಟವಾಗುತ್ತದೆ.

ಈ ತಿಮಿಂಗಿಲದ ವಾಂತಿ ಸುದುಪಯೋಗವಾಗಲಿ:

ಸದ್ಯ ಅರಣ್ಯ ಇಲಾಖೆಗೆ ಹಸ್ತಾಂತರವಾಗಿರುವ ಈ ಅಂಬೆರ್ಗ್ರಿಸ್ ಅತೀ ವಿರಳವಾಗಿ ದೊರಕುವ ಹಾಗೂ ಕೋಟಿ ಬೆಲೆ ಬಾಳುವಂತಾಗಿದ್ದು, ಇದು ನೋಡಲು ಸಿಗುವುದು ಬಹು ಅಪರೂಪ. ಅರಣ್ಯ ಇಲಾಖೆ ಸುಪರ್ದಿಯಲ್ಲಿ ಇದ್ದರೆ ಇದರ ಅಧ್ಯಯನಕ್ಕೆ ಸಿಗುವುದಿಲ್ಲ. ಹೀಗಾಗಿ ಕಾರವಾರದಲ್ಲಿ ಇರುವ ವಿಜ್ಞಾನ ಅಧ್ಯಯನ ಕೇಂದ್ರಕ್ಕೆ ನೀಡಿದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಸಹಾಯವಾಗಲಿದೆ ಎಂದು ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ ಹರಗಿ ಮನವಿ ಮಾಡಿದ್ದಾರೆ.

Last Updated : Apr 25, 2021, 12:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.